ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ್ ಎಂಬುವವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಸ್ತುತ ಹಾಸನದಲ್ಲಿ ಬೀಡುಬಿಟ್ಟಿರುವ ಎಸ್‌ಐಟಿ ತಂಡ ಅಶ್ಲೀಲ ವಿಡಿಯೊಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಪ್ರೀತಂಗೌಡ ಆಪ್ತ ಲಿಖಿತ್ ಮತ್ತು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್‌ನನ್ನು ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದುಕೊಳ್ಳಲಾಗಿದೆ.
ಎಸ್‌ಐಟಿ ಅಧಿಕಾರಿಗಳು ಹಾಸನ ಸೈಬರ್ ಪೊಲೀಸ್ ಠಾಣೆಯಲ್ಲಿ ಈ ಇಬ್ಬರ ವಿಚಾರಣೆ ನಡೆಸುತ್ತಿದ್ದಾರೆ.