ರಾಜ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣ: ಪ್ರೀತಂ ಗೌಡ ಆಪ್ತ ಮತ್ತು ಕಚೇರಿ ಸಿಬ್ಬಂದಿ ಎಸ್‌ಐಟಿ ವಶಕ್ಕೆ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್‌ ಮತ್ತು ಕಚೇರಿಯ ಸಿಬ್ಬಂದಿ ಚೇತನ್‌ ಎಂಬುವವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಸ್ತುತ ಹಾಸನದಲ್ಲಿ ಬೀಡುಬಿಟ್ಟಿರುವ ಎಸ್‌ಐಟಿ ತಂಡ ಅಶ್ಲೀಲ ವಿಡಿಯೊಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಪ್ರೀತಂಗೌಡ ಆಪ್ತ ಲಿಖಿತ್‌ ಮತ್ತು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್‌ನನ್ನು ಪೆನ್‌ಡ್ರೈವ್‌ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದುಕೊಳ್ಳಲಾಗಿದೆ.

ಎಸ್‌ಐಟಿ ಅಧಿಕಾರಿಗಳು ಹಾಸನ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಈ ಇಬ್ಬರ ವಿಚಾರಣೆ ನಡೆಸುತ್ತಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

52 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

1 hour ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago