ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ವಿಸ್ತರಿಸಿ ಶನಿವಾರ (ಜೂನ.29) ಆದೇಶ ಹೊರಡಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಪ್ರಜ್ವಲ್‌ಗೆ ಜುಲೈ.8 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಇಂದು ಪಜ್ವಲ್ ಕಸ್ಟಡಿ ಅಂತ್ಯವಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೇಳೆ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.
ಪ್ರಜ್ವಲ್ ರೇವಣ್ಣ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಮತ್ತು ಜೈಲು ಅಧಿಕಾರಿಗಳು ಅವಕಾಶ ನೀಡಿದರೇ ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.





