ರಾಜ್ಯ

ಹಾಸನ ಪೆನ್‌ಡ್ರೈವ್‌ ಪ್ರಕರಣ: ಪ್ರಜ್ವಲ್‌ ರೇವಣ್ಣಗೆ ಜುಲೈ 8ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನ ವಿಸ್ತರಿಸಿ ಶನಿವಾರ (ಜೂನ.29) ಆದೇಶ ಹೊರಡಿಸಿದೆ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಪ್ರಜ್ವಲ್‌ಗೆ ಜುಲೈ.8 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಇಂದು ಪಜ್ವಲ್‌ ಕಸ್ಟಡಿ ಅಂತ್ಯವಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೇಳೆ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.

ಪ್ರಜ್ವಲ್‌ ರೇವಣ್ಣ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್‌ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಮತ್ತು ಜೈಲು ಅಧಿಕಾರಿಗಳು ಅವಕಾಶ ನೀಡಿದರೇ ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

51 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

53 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

55 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

1 hour ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

1 hour ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

1 hour ago