ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಪರಾಧಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಅರ್ಜಿ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಇದನ್ನು ಓದಿ : ಪೊಲೀಸ್ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಅತ್ಯಾಚಾರ ಸೇರಿದಂತೆ ವಿವಿಧ ಗಂಭೀರ ಆರೋಪಗಳ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಮನವಿಯನ್ನು ತಿರಸ್ಕಾರ ಮಾಡಿತ್ತು.
ಪ್ರಕರಣಗಳನ್ನು ವಿಚಾರಣೆ ಮಾಡುತ್ತಿರುವ ಪ್ರಸ್ತುತ ನ್ಯಾಯಾಧೀಶರ ಮೇಲೆ ಪಕ್ಷಪಾತದ ಅನುಮಾನ ಇದೆ ಎಂದು ಪ್ರಜ್ವಲ್ ರೇವಣ್ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಯುತ ವಿಚಾರಣೆ ನಡೆಯುವುದಿಲ್ಲ ಎಂಬ ಕಾರಣದಿಂದಲೇ ಪ್ರಕರಣವನ್ನು ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.



