ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೊಗಳ ಕುರಿತು ತನಿಖೆ ಆರಂಭವಾಗಿದ್ದು, ಇದೀಗ ಪೆನ್‌ಡ್ರೈವ್ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ.
ನಿನ್ನೆಯಷ್ಟೇ ಹಾಸನ ಜಿಲ್ಲೆಯ ಬಿಜೆಪಿ ಮುಖಂಡ ದೇವರಾಜೇಗೌಡ ಪೆನ್‌ಡ್ರೈವ್‌ನಲ್ಲಿದ್ದ ವಿವರಗಳನ್ನು ಬಹಿರಂಗಪಡಿಸಿರುವುದು ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ್. ಪೆನ್‌ಡ್ರೈವ್ ಹಂಚಿಕೆ ಹಿಂದೆ ಯಾರಿದ್ದಾರೆ ಎಂಬ ಎಲ್ಲಾ ದಾಖಲೆಗಳನ್ನು ಎಸ್‌ಐಟಿ ಮುಂದಿಡುವೆ ಎಂದಿದ್ದರು.
ಈ ಹೇಳಿಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಕಾರ್ತಿಕ್ ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಬಿಟ್ಟರೆ ಬೇರೆ ಯಾರಿಗೂ ವಿಡಿಯೊ ಹಾಗೂ ಫೋಟೊಗಳನ್ನು ಹಂಚಿಕೊಂಡಿಲ್ಲ ಎಂದು ಹೇಳಿದ್ದರು. ಹೀಗಾಗಿ ಕಾರ್ತಿಕ್‌ಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೊಟೀಸ್ ನೀಡಿತ್ತು. ಆದರೆ ಇದೀಗ ಕಾರ್ತಿಕ್ ನಾಪತ್ತೆಯಾಗಿದ್ದಾನೆ.
ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿ ಕಾರ್ತಿಕ್ 13 ವರ್ಷಗಳ ಕಾಲ ಕಾರು ಚಾಲಕನಾಗಿ ಪ್ರಜ್ವಲ್ ರೇವಣ್ಣ ಬಳಿ ಕೆಲಸ ನಿರ್ವಹಿಸಿದ್ದ. ಕಾರ್ತಿಕ್ ನಾಪತ್ತೆಯಾಗಿರುವುದರ ಬಗ್ಗೆ ಮಾತನಾಡಿದ ಹೆಚ್‌ಡಿ ಕುಮಾರಸ್ವಾಮಿ ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ ಎಂದಿದ್ದಾರೆ ಅಲ್ಲದೇ ಆತ ಮಲೇಷ್ಯಾಗೆ ಹೋಗಿದ್ದಾನೆ ಎಂದೂ ಸಹ ಹೇಳಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…