ರಾಜ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣ: ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ: ಡಿಕೆ ಸುರೇಶ್‌

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕೆಸರೆರಚಾಟ ಏರ್ಪಟ್ಟಿದೆ. ತನ್ನನ್ನು ಹಾಗೂ ತನ್ನ ಅಣ್ಣ ಡಿಕೆ ಶಿವಕುಮಾರ್‌ ಅವರನ್ನು ಚಿಲ್ಲರೆ ಸಹೋದರರು, ಅವರದು ʼ420 ಕುಟುಂಬʼ ಎಂದು ಹೇಳಿದ್ದ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಡಿಕೆ ಸುರೇಶ್‌ ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ ಎಂದು ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ನಾನು ಅವರ ಕುಟುಂಬವನ್ನು 420 ಕುಟುಂಬ ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್‌ಡ್ರೈವ್‌ ಎಂದು ವ್ಯಂಗವಾಡಿದರು.

ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಆಸ್ತಿ ಪೆನ್‌ಡ್ರೈವ್‌ ಆಗಿದೆ. ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ. ಇದು ಪೆನ್‌ಡ್ರೈವ್‌ ಕುಟುಂಬ. ಎಲ್ಲವನ್ನೂ ದೇಶ ಹಾಗೂ ರಾಜ್ಯದ ಜನರು ಗಮನಿಸುತ್ತಿದ್ದಾರೆ. ಬೇಕಿದ್ದರೆ ಅವರ ಮನಸಿಗೆ ಬಂದಹಾಗೆ ಬೈದುಕೊಳ್ಳಲಿ. ಹಾಸನ ಹೆಣ್ಣುಮಕ್ಕಳ ಮರ್ಯಾದೆ ಉಳಿಸಬೇಕು ಅಷ್ಟೇ. ನಾವು ಅವರನ್ನು ಕೆಣಕಿಲ್ಲ ಎಂದು ಡಿಕೆ ಸುರೇಶ್‌ ಹೇಳಿದರು.

ಅಲ್ಲದೇ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ಅವರದ್ದೇ ಮೈತ್ರಿ ಪಾರ್ಟ್‌ನರ್.‌ ಅವರ ಬಗ್ಗೆ ಮಾತನಾಡುವ ಧೈರ್ಯ ಕುಮಾರಸ್ವಾಮಿಗೆ ಇಲ್ಲ. ಹಾಗಾಗಿ ನಮ್ಮ ಮೇಲೆ ಮಾತನಾಡುತ್ತಿದ್ದಾರೆ ಎಂದೂ ಸಹ ಡಿಕೆ ಸುರೇಶ್‌ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಕುಮಾರಸ್ವಾಮಿ ಹೇಳಿದ್ದಿಷ್ಟು:

ಇನ್ನು ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರವಾಗಿ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ್ದು ಪ್ರಜ್ವಲ್‌ ಮಾಜಿ ಕಾರು ಡ್ರೈವರ್‌ ಕಾರ್ತಿಕ್‌ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಾತನಾಡಿದ ಹೆಚ್‌ಡಿಕೆ ಪ್ರಜ್ವಲ್‌ ಕಾರು ಡ್ರೈವರ್‌ ಆಗಿದ್ದ ಕಾರ್ತಿಕ್‌ನನ್ನು ಮಲೇಷ್ಯಾಗೆ ಕಳುಹಿಸದ್ಯಾರು? ಆತ ವಿಡಿಯೊ ಬಿಡುಗಡೆ ಮಾಡಿದ್ದಾನಲ್ವಾ? ಆ ವಿಡಿಯೊ ಬಿಡುಗಡೆ ಮಾಡಿಸಿದ್ಯಾರು? ಆತ ದೇವರಾಜೇಗೌಡ ಕೈನಲ್ಲಿ ಪೆನ್‌ಡ್ರೈವ್‌ ಕೊಟ್ಟೆ ಎಂದು ಹೇಳಿದ್ದ. ಆದರೆ ಈಗ ಚಿಲ್ಲರೆ ಸಹೋದರರು ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

8 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

9 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

10 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

10 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

10 hours ago