ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಕುರಿತು ತನಿಖೆ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಯಸಸ್ವಿಯಾದ ಎಸ್‌ಐಟಿ ತಂಡಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತೆ. ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.
ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಈ ಮಹತ್ವದ ತೀರ್ಪು ನೀಡಿದೆ.
ಪೊಲೀಸರು ಮೊದಲಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎಸ್‌ಐಟಿಗೆ ಅಭಿನಂದನೆ ಹೇಳುತ್ತೇನೆ. ಇದು ಐತಿಹಾಸಿಕ ತೀರ್ಪು. ನ್ಯಾಯಾಲಯಕ್ಕೆ ನಮ್ಮ ಎಸ್‌ಐಟಿ ಎಲ್ಲಾ ದಾಖಲೆಯನ್ನು ಕೊಟ್ಟಿತ್ತು ಪೊಲೀಸರು ಬೇಗ ತನಿಖೆ ಮುಗಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…