prjwal revanna
ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದ್ದು, ಇಂದು ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣವನ್ನು ಕೋರ್ಟ್ ಪ್ರಕಟಿಸಲಿದೆ.
ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಮಾಡಲಾಗಿದೆ. ಆತ ಒಬ್ಬ ಸಂಸದನಾಗಿ ಇಂತಹ ನೀಚ ಕೃತ್ಯ ಎಸಗಿದ್ದಾನೆ. ಮನೆಕೆಲಸದವಳ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್ ಮೇಲೆ ಮಾಡಿದ್ದಾನೆ. ಆತನಿಗೆ ನೀಡುವ ಶಿಕ್ಷೆ ಬೇರೆಯವರಿಗೆ ಎಚ್ಚರಿಕೆಯ ಸಂದೇಶವಾಗಬೇಕು ಎಂದು ಪ್ರಾಸಿಕ್ಯೂಟರ್ ಪರ ಎಸ್‌ಪಿಪಿ ಬಿ.ಎನ್.ಜಗದೀಶ್ ವಾದ ಮಂಡಿಸಿದರು.
ಇನ್ನು ಪ್ರಜ್ವಲ್ ರೇವಣ್ಣ ವಯಸ್ಸು ಕೇವಲ 34 ವರ್ಷ. ಆತನ ತಾತ ಮಾಜಿ ಪ್ರಧಾನಿ, ಇಷ್ಟು ದಿನದ ಆತನ ರಾಜಕೀಯ ಸ್ಥಾನಮಾನ ಹಾಳು ಮಾಡಬಾರದು. ಅದು ಚುನಾವಣೆ ವೇಳೆ ಆತನ ವಿಡಿಯೋ ಹರಿಬಿಡಲಾಗಿದೆ. ರಾಜಕೀಯ ಭವಿಷ್ಯ ಹಾಳು ಮಾಡುವ ಉದ್ದೇಶದಿಂದಲೇ ವಿಡಿಯೋ ಹರಿಬಿಡಲಾಗಿದೆ. ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಆದೇಶ ಹೊರಡಿಸಬೇಕು. ಸಂತ್ರಸ್ತೆಗಿಂತ ಅಪರಾಧಿಗೆ ಹೆಚ್ಚು ಹಾನಿಯಾಗಿದೆ ಎಂದು ಪ್ರಜ್ವಲ್ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ವಾದ ಮಂಡಿಸಿದರು.
ಇನ್ನು ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್ ರೇವಣ್ಣ, ನಾನು ಹಲವು ಮಹಿಳೆಯರೊಂದಿಗೆ ಇಂತಹ ಕೃತ್ಯ ನಡೆಸಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಂಸದನಾಗಿದ್ದ ವೇಳೆ ಯಾರೂ ಇಂತಹ ಆರೋಪ ಮಾಡಿರಲಿಲ್ಲ. ಚುನಾವಣೆ ಸಮಯದಲ್ಲೇ ಅವರು ಈ ವಿಡಿಯೋ ಹರಿಬಿಟ್ಟಿದ್ದಾರೆ. ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ. ನಾನು ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದೇನೆ. ಕಳೆದ 6 ತಿಂಗಳುಗಳಿಂದ ತಂದೆ-ತಾಯಿಯನ್ನು ನೋಡಿಲ್ಲ ಎಂದು ಅಳುತ್ತಲೇ ಹೇಳಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…