ರಾಜ್ಯ

ಮಹಿಳೆ ಮೇಲೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಕೇಸ್:‌ ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದ್ದು, ಇಂದು ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಪ್ರಕಟಿಸಲಿದೆ.

ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಮಾಡಲಾಗಿದೆ. ಆತ ಒಬ್ಬ ಸಂಸದನಾಗಿ ಇಂತಹ ನೀಚ ಕೃತ್ಯ ಎಸಗಿದ್ದಾನೆ. ಮನೆಕೆಲಸದವಳ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್‌ ಮೇಲೆ ಮಾಡಿದ್ದಾನೆ. ಆತನಿಗೆ ನೀಡುವ ಶಿಕ್ಷೆ ಬೇರೆಯವರಿಗೆ ಎಚ್ಚರಿಕೆಯ ಸಂದೇಶವಾಗಬೇಕು ಎಂದು ಪ್ರಾಸಿಕ್ಯೂಟರ್‌ ಪರ ಎಸ್‌ಪಿಪಿ ಬಿ.ಎನ್.ಜಗದೀಶ್‌ ವಾದ ಮಂಡಿಸಿದರು.

ಇನ್ನು ಪ್ರಜ್ವಲ್‌ ರೇವಣ್ಣ ವಯಸ್ಸು ಕೇವಲ 34 ವರ್ಷ. ಆತನ ತಾತ ಮಾಜಿ ಪ್ರಧಾನಿ, ಇಷ್ಟು ದಿನದ ಆತನ ರಾಜಕೀಯ ಸ್ಥಾನಮಾನ ಹಾಳು ಮಾಡಬಾರದು. ಅದು ಚುನಾವಣೆ ವೇಳೆ ಆತನ ವಿಡಿಯೋ ಹರಿಬಿಡಲಾಗಿದೆ. ರಾಜಕೀಯ ಭವಿಷ್ಯ ಹಾಳು ಮಾಡುವ ಉದ್ದೇಶದಿಂದಲೇ ವಿಡಿಯೋ ಹರಿಬಿಡಲಾಗಿದೆ. ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಆದೇಶ ಹೊರಡಿಸಬೇಕು. ಸಂತ್ರಸ್ತೆಗಿಂತ ಅಪರಾಧಿಗೆ ಹೆಚ್ಚು ಹಾನಿಯಾಗಿದೆ ಎಂದು ಪ್ರಜ್ವಲ್‌ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ವಾದ ಮಂಡಿಸಿದರು.

ಇನ್ನು ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್‌ ರೇವಣ್ಣ, ನಾನು ಹಲವು ಮಹಿಳೆಯರೊಂದಿಗೆ ಇಂತಹ ಕೃತ್ಯ ನಡೆಸಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಂಸದನಾಗಿದ್ದ ವೇಳೆ ಯಾರೂ ಇಂತಹ ಆರೋಪ ಮಾಡಿರಲಿಲ್ಲ. ಚುನಾವಣೆ ಸಮಯದಲ್ಲೇ ಅವರು ಈ ವಿಡಿಯೋ ಹರಿಬಿಟ್ಟಿದ್ದಾರೆ. ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ. ನಾನು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಓದಿದ್ದೇನೆ. ಕಳೆದ 6 ತಿಂಗಳುಗಳಿಂದ ತಂದೆ-ತಾಯಿಯನ್ನು ನೋಡಿಲ್ಲ ಎಂದು ಅಳುತ್ತಲೇ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

14 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago