prajwal revanna pleaded tearfully in court
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಇಂದು ಪ್ರಜ್ವಲ್ ರೇವಣ್ಣ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ತನಿಖೆಗಾಗಿ ಬಾಡಿ ವಾರೆಂಟ್ ಮೂಲಕ ಕಸ್ಟಡಿಗೆ ಪಡೆಯಲು ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿಯಾಗಿದ್ದು, ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಇಬ್ಬರನ್ನೂ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.
ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ. ಜೈಲಿನೊಳಗೆ ಮೊಬೈಲ್ ಬಳಕೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…
ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ವನಸಿರಿ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಹಾಗೆ ಹಲವು ದೇವಾಲಯಗಳ ಬೀಡು, ಈ…
ಚುನಾವಣಾ ಲಾಭಕ್ಕಾಗಿ ಹಳೆ ಪಿಂಚಣಿ ಯೋಜನೆ ಮರುಜರಿಗೆ ಹೊರಟಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ೩.೫…