ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಡಿ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದಾನೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಆರೋಪಿ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು.
ಕೋರ್ಟ್‌ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜಡ್ಜ್ ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ. ನಿಮಗೆ ಮೆಡಿಸನ್ ಕೊಡ್ತಿದ್ದಾರಾ ಎಂಬ ಜಡ್ಜ್ ಪ್ರಶ್ನೆಗೆ ಪ್ರಜ್ವಲ್ ಹೌದು ಮೆಡಿಸನ್ ಕೊಡ್ತಿದ್ದಾರೆ ಎಂದು ಉತ್ತರ ನೀಡಿದ್ದಾನೆ. ಪೊಲೀಸ್ ಕಸ್ಟಡಿಯಲ್ಲಿ ಏನಾದರೂ ತೊಂದರೆ ಆಯ್ತಾ ಎಂಬ ಪ್ರಶ್ನೆಗೆ ಪ್ರಜ್ವಲ್ ಇಲ್ಲಾ ನನಗೆ ಯಾವುದೇ ತೊಂದರೆಯಿಲ್ಲ ಎಂದು ಉತ್ತರ ಕೊಟ್ಟಿದ್ದಾನೆ.
ಬಳಿಕ ಜಡ್ಜ್ ಪೊಲೀಸರ ಬಳಿ ಪ್ರಜ್ವಲ್ ಮೆಡಿಕಲ್ ಟೆಸ್ಟ್‌ನ ವರದಿ ಕೇಳಿದ್ದಾರೆ. ಎಲ್ಲಾ ವರದಿಗಳನ್ನು ನೋಡಿದ ಪೊಲೀಸರು, ಮತ್ತೆ ಪ್ರಜ್ವಲ್ ರೇವಣ್ಣನನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…
ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…
ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…