Mysore
30
haze

Social Media

ಸೋಮವಾರ, 30 ಮಾರ್ಚ್ 2026
Light
Dark

ಲೈಂಗಿಕ ದೌರ್ಜನ್ಯ ಪ್ರಕರಣ: ಹಾಸನದ ಪ್ರಜ್ವಲ್ ಮನೆಯಲ್ಲಿ ಎಸ್ಐಟಿ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ಐಟಿ ಅಧಿಕಾರಿಗಳು ಹಾಸನದಲ್ಲಿರುವ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗುತ್ತಿದೆ. ಈ ಬೆನ್ನಲ್ಲೇ ಮತ್ತೋರ್ವ ಮಹಿಳೆ ನನ್ನ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಮಾಡಿದ್ದಾರೆ.

ಸಂತ್ರಸ್ತ ಮಹಿಳೆ ಮಾಡಿದ ಆರೋಪದ ಮೇರೆಗೆ ಇಂದು ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಹಾಸನದ ಆರ್.ಸಿ.ನಗರದಲ್ಲಿರುವ ತಮ್ಮ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ಮಾಡಿದ್ದಾರೆ. ಎಸ್ಐಟಿ ಜೊತೆಗೆ ಎಫ್ಎಸ್ಎಲ್ ತಂಡ ಕೂಡ ಪ್ರಜ್ವಲ್ ಮನೆಗೆ ಭೇಟಿ ನೀಡಿದ್ದು, ಅನೇಕ ಮಾಹಿತಿಗಳನ್ನು ಕಲೆಹಾಕಿದೆ ಎನ್ನಲಾಗಿದೆ. ಒಟ್ಟಾರೆಯಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಒಂದಲ್ಲಾ ಒಂದು ಸಂಕಷ್ಟ ಎದುರಾಗುತ್ತಿದ್ದು, ಪ್ರಜ್ವಲ್‌ನ ಮುಂದಿನ ನಡೆಯೇನು ಎಂಬುದು ಎಲ್ಲರ ಯಕ್ಷ ಪ್ರಶ್ನೆಯಾಗಿದೆ.

Tags:
error: Content is protected !!