ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ಐಟಿ ಅಧಿಕಾರಿಗಳು ಹಾಸನದಲ್ಲಿರುವ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗುತ್ತಿದೆ. ಈ ಬೆನ್ನಲ್ಲೇ ಮತ್ತೋರ್ವ ಮಹಿಳೆ ನನ್ನ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಮಾಡಿದ್ದಾರೆ.
ಸಂತ್ರಸ್ತ ಮಹಿಳೆ ಮಾಡಿದ ಆರೋಪದ ಮೇರೆಗೆ ಇಂದು ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಹಾಸನದ ಆರ್.ಸಿ.ನಗರದಲ್ಲಿರುವ ತಮ್ಮ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ಮಾಡಿದ್ದಾರೆ. ಎಸ್ಐಟಿ ಜೊತೆಗೆ ಎಫ್ಎಸ್ಎಲ್ ತಂಡ ಕೂಡ ಪ್ರಜ್ವಲ್ ಮನೆಗೆ ಭೇಟಿ ನೀಡಿದ್ದು, ಅನೇಕ ಮಾಹಿತಿಗಳನ್ನು ಕಲೆಹಾಕಿದೆ ಎನ್ನಲಾಗಿದೆ. ಒಟ್ಟಾರೆಯಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಒಂದಲ್ಲಾ ಒಂದು ಸಂಕಷ್ಟ ಎದುರಾಗುತ್ತಿದ್ದು, ಪ್ರಜ್ವಲ್‌ನ ಮುಂದಿನ ನಡೆಯೇನು ಎಂಬುದು ಎಲ್ಲರ ಯಕ್ಷ ಪ್ರಶ್ನೆಯಾಗಿದೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…