ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.
ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್‌ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಇದನ್ನು ಓದಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ
ಪ್ರಜ್ವಲ್ ರೇವಣ್ಣ ಅರ್ಜಿಯನ್ನು ಸುಪ್ರೀಂಕೋರ್ಟ್ ಸಿಜೆಐ ಪೀಠ ತಿರಸ್ಕರಿಸಿದೆ. ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ, ಕೆಳ ನ್ಯಾಯಾಲಯದ ಜಡ್ಜ್ ಅವರ ಅಭಿಪ್ರಾಯಗಳು, ಪೂರ್ವಾಗ್ರಹಪೀಡಿತರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಹೇಳಿದೆ.
ಪ್ರಸ್ತುತ ಕೇಸ್‌ನಲ್ಲಿ ಹಾಜರುಪಡಿಸುವ ಸಾಕ್ಷ್ಯಗಳ ಆಧಾರದ ಮೇಲೆ ಜಡ್ಜ್ ತೀರ್ಪು ನೀಡಬೇಕೇ ವಿನಃ ಹಿಂದಿನ ಕೇಸ್ ತೀರ್ಪು ಆಧಾರದ ಮೇಲೆ ಅಲ್ಲ ಎಂದು ಹೇಳಿ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…