ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಜಾಬಂಧಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೈದಿ ಸಂಖ್ಯೆ 15528 ನೀಡಲಾಗಿದ್ದು, ಇಂದಿನಿಂದ ಜೈಲಿನಲ್ಲಿ ಕೈದಿ ಸಮವಸ್ತ್ರ ಧರಿಸಬೇಕಿದೆ.
ಜೈಲಿನ ಸಜಾಬಂಧಿ ಕೈದಿಗಳ ನಿಯಮಗಳನ್ನು ಪ್ರಜ್ವಲ್ ರೇವಣ್ಣ ಪಾಲಿಸಬೇಕಿದ್ದು, ನಿಯಮದ ಪ್ರಕಾರ ಜೈಲು ಅಧೀಕ್ಷಕರು ನೀಡುವ ಕೆಲಸ ಮಾಡಬೇಕು. ಇಂದು ಪ್ರಜ್ವಲ್ ರೇವಣ್ಣ ಅವರಿಗೆ ಜೈಲಿನ ಸಿಬ್ಬಂದಿ ಬಿಳಿ ಸಮವಸ್ತ್ರ ಕೊಡಲಿದ್ದಾರೆ. ಅಪರಾಧಿ ಪ್ರಜ್ವಲ್ ರೇವಣ್ಣರನ್ನು ಸಜಾಬಂಧಿ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ.
ಜೈಲಿನೊಳಗೆ ಪ್ರಜ್ವಲ್ ರೇವಣ್ ಎಂಟು ಗಂಟೆ ಕೆಲಸ ಮಾಡಬೇಕು. ಕರಕುಶಲ ವಸ್ತು, ಮರ ಕೆಲಸ ಸೇರಿದಂತೆ ಯಾವುದಾದರೂ ಒಂದು ಕೆಲಸ ಆಯ್ಕೆ ಮಾಡಿಕೊಳ್ಳಬೇಕಿದೆ.
ಪ್ರಜ್ವಲ್ ಆಯ್ಕೆ ಮಾಡಿಕೊಂಡ ಕೆಲಸಕ್ಕೆ ತಕ್ಕಂತೆ ಸಂಬಳ ಪಾವತಿಸಲಾಗುತ್ತದೆ. ಮೊದಲು ಒಂದು ವರ್ಷ ಕೌಶಲ್ಯ ರಹಿತ ಎಂದು 524 ರೂ ಸಂಬಳ ನೀಡಲಾಗುತ್ತದೆ.
ಬಳಿಕ ಕೌಶಲ್ಯ ಮಟ್ಟಕ್ಕೆ ಏರಿಕೆ ಮಾಡಲಾಗುತ್ತದೆ. ಬಳಿಕ ಅನುಭವದ ನಂತರ ನುರಿತ ವರ್ಗಕ್ಕೆ ಅಧಿಕಾರಿಗಳು ಭರ್ತಿ ನೀಡಲಿದ್ದಾರೆ. ಇಷ್ಟು ದಿನ ವಿಚಾರಣಾ ಕೈದಿಯಾಗಿದ್ದ ಪ್ರಜ್ವಲ್ ರೇವಣ್ಣ ನಿನ್ನೆಯಿಂದ ಸಜಾಬಂಧಿಯಾಗಿದ್ದಾರೆ. ಇಂದಿನಿಂದ ಪ್ರಜ್ವಲ್ ರೇವಣ್ಣ ಜೀವನಶೈಲಿ ಸಂಪೂರ್ಣ ಬದಲಾಗಲಿದೆ.
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…
ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…