ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೋ ಮಾಡಿರುವ ತುಣುಕು ಮಾಧ್ಯಮಕ್ಕೆ ಲಭ್ಯವಾಗಿದ್ದು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೋಗಳನ್ನು ನಾನು ಬಿಜೆಪಿಯ ದೇವರಾಜೇಗೌಡ ಅವರಿಗೆ ಮಾತ್ರ ನೀಡಿದ್ದೇನೆ ಹೊರತು ಕಾಂಗ್ರೆಸ್‌ನವರಿಗೆ ನಾನು ಕೊಟ್ಟಿಲ್ಲ, ನಾನು ಕಾಂಗ್ರೆಸ್‌ನವರಿಗೆ ಕೊಡುವುದಾಗಿದ್ದರೆ ಬಿಜೆಪಿಯ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ. ದೇವರಾಜೇಗೌಡರಿಗೆ ಬಿಟ್ಟು ಬೇರೆ ಯಾರಿಗೂ ಒಂದು ತುಣುಕನ್ನು ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು 15 ವರ್ಷದಿಂದ ಪ್ರಜ್ವಲ್ ಹಾಗೂ ಕುಟುಂಬದ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೆ. ಆ ಸಂಬರ್ಧದಲ್ಲಿ ನನ್ನ ಜಮೀನನ್ನು ಬರೆಸಿಕೊಂಡು ನನ್ನ ಹಾಗೂ ನನ್ನ ಪತ್ನಿ ಮೇಲೆ ಹಲ್ಲೆ ಮಾಡಿ ಹಿಂಸೆ ನೀಡಿದ್ರು. ಹಾಗಾಗಿ ನಾನು ಒಂದು ವರ್ಷದ ಈಚೆಗೆ ಕೆಸಲ ಬಿಟ್ಟು ಅವರ ಮನೆಯಿಂದ ಹೊರ ಬಂದೆ. ಆ ಸಂದರ್ಭದಲ್ಲಿ ನನಗೆ ಯಾರು ನ್ಯಾಯ ಕೊಡಿಸಲಿಲ್ಲ. ಹಾಗಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ಬಳಿ ಹೋಗಿ ತನಗಾದ ಅನ್ಯಾಯವನ್ನು ಹೇಳಿಕೊಂಡೆ.
ಅದೇ ಸಮಯದಲ್ಲಿ ದೇವೆರಾಜೇಗೌಡ ಅವರು ಪ್ರಜ್ವಲ್ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. ನಿನ್ನ ಬಳಿ ಇರುವ ಪೋಟೋ ಮತ್ತು ವಿಡಿಯೋಗಳನ್ನು ನನಗೆ ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ಭರವಸೆ ನೀಡಿದ್ದರಿಂದ ಅವರ ಮಾತನ್ನು ನಂಬಿ ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿಯನ್ನು ಅವರಿಗೆ ಕೊಟ್ಟೆ.
ಆದರೆ ಅವರು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೋ ಅಥವಾ ಪೆನ್‌ಡ್ರೈವ್ ಹಂಚಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ವಿನಾಕಾರಣ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಎಲ್ಲಾ ವಿಚಾರವನ್ನು ಎಸ್‌ಐಟಿ ಮುಂದೆ ಹೇಳುತ್ತೇನೆ ಎಂದು ಅವರು ವಿಡಿಯೋ ತುಣುಕಿನಲ್ಲಿ ಹೇಳಿದ್ದಾರೆ.
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…