ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಉಚ್ಛಾಟಿತ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದವರನ್ನು ಎಸ್‌ಐಟಿ ಅಧಿಕಾರಿಗಳು ಗುರುವಾರ ತಡರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದು ಎಸ್‌ಐಟಿ ಕಚೇರಿಗೆ ಪ್ರಜ್ವಲ್‌ನನ್ನು ಕರೆ ತರುವ ಸಾಧ್ಯತೆಗಳು ಹೆಚ್ಚಿದ್ದು, ಪ್ರಜ್ವಲ್ ಪರ ವಕೀಲರಾದ ಅರುಣ್ ಬೆಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಎಎನ್‌ಐ ಲೈಗಿಂಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿ ಕರೆದೊಯ್ದಿದ್ದಾರೆ. ಇನ್ನು ಅವರನ್ನು ನೋಡಲು ಪ್ರಜ್ವಲ್ ಪರ ವಕೀಲರಾದ ಅರುಣ್ ಅವರು ಎಸ್‌ಐಟಿ ಕಚೇರಿ ಬಳಿ ಬಂದಿದ್ದಾರೆ ಎಂದು ವಿಡಿಯೋ ತುಣುಕಿನ ಜತೆ ಬರೆದುಕೊಂಡಿದ್ದಾರೆ.
ಪ್ರಜ್ವಲ್ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಲ್ಲಿರುವ ಕಾರಣ ಅವರನ್ನು ಬಂಧಿಸಲಾಗಿದೆ. ಇವರೆಗೆ ಕಲೆ ಹಾಕಲಾಗಿರುವ ದಾಖಲೆಗಳ ಸಮೇತ ಪ್ರಜ್ವಲ್‌ರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಆರೋಪಿಯ ವಿಚಾರಣೆ ಅಗತ್ಯವಿರುವ ಕಾರಣ ನ್ಯಾಯಾಲಯದಲ್ಲಿ ಕಸ್ಟಡಿಗೆ ಪಡೆಯುವ ಬಗ್ಗೆ ಮನವಿ ಮಾಡಲಾಗುವುದು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…