ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಪ್ರಜ್ಚಲ್ ರೇವಣ್ಣ ಮೇ. 31 ರಂದು ಶರಣಾಗುವುದಾಗಿ ಅವರೇ ಹೇಳಿದ್ದಾರೆ ಹಾಗಾಗಿ ಎಸ್‌ಐಟಿ ಪ್ರಜ್ವಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಇಂದು(ಮೇ.೨೭) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಸ್‌ಐಟಿ ಪ್ರಜ್ವಲ್‌ಗೆ ಬ್ಲೂ ಕಾರ್ನರ್ ನೋಟಿಸ್ ನೀಡಿದೆ. ಜೊತೆಗೆ ಅರೆಸ್ಟ್ ವಾರೆಂಟ್ ಕೂಡ ಇದೆ. ಪ್ರಜ್ವಲ್ ಬಂಧನದ ನಂತರ ಎಸ್‌ಐಟಿ ಬಳಿ ಇರುವ ಮಾಹಿತಿ, ದಾಖಲೆಗಳ ಆಧಾರದ ಮೇಲೆ ವಿಚಾರಣೆ ನಡೆಯಲಿದೆ ಎಂದರು.
ಪ್ರಜ್ವಲ್ ಎಸ್‌ಐಟಿ ಎದುರು ಏನೆಲ್ಲ ಹೇಳಿಕೆ ಕೊಡುತ್ತಾರೊ ಕೊಡಲಿ. ತನಿಖಾ ತಂಡ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಇಲ್ಲಿಯವರೆಗೂ ರಾಜ್ಯದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಪ್ರಜ್ವಲ್ ಮೊದಲು ರಾಜ್ಯಕ್ಕೆ ಬಂದು ತನಿಖೆಗೆ ಒಳಪಡಲಿ ಎಂದು ಅವರು ತಿಳಿಸಿದರು.
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…