ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ಇಂದು(ಮೇ.15) ರಾಜ್ಯ ರಾಜಾಧಾನಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಪ್ರಜ್ವಲ್ ಇಂದೂ ಸಹ ರಾಜ್ಯಕ್ಕೆ ಮರಳಿ ಬಾರದೆ ವಿದೇಶದಲ್ಲೆ ಉಳಿದುಕೊಂಡಿದ್ದು, ಬೆಂಗಳೂರಿಗೆ ವಾಪಸ್ ಆಗುವುದನ್ನು ಮತ್ತೆ ಮುಂದೂಡಿದ್ದಾರೆ.
ಪ್ರಜ್ವಲ್ ಇಂದು (ಮೇ.15) ಬೆಂಗಳೂರಿಗೆ ಆಗಮಿಸುವುದಕ್ಕೆ ಸಿದ್ಧತೆ ಮಾಡಿಕೊಂಡು, ವಿಮಾನ ಟಿಕೆಟ್ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದಂತೆ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತ್ತಿದ್ದರು. ಆದರೆ ಜರ್ಮನಿಯಿಂದ ಬುಧುವಾರ (ಮೇ.15) ಹೊರಟ ವಿಮಾನದಲ್ಲಿ ಪ್ರಜ್ವಲ್ ಇಲ್ಲ ಎಂಬ ಮಾಹಿತಿ ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿತು. ಪ್ರಜ್ವಲ್ ಈಗಾಗಲೇ ಎರಡು ಸಲ ವಿಮಾನ ಟಿಕೆಟ್ ಬುಕ್ ಮಾಡಿ ವಿಮಾನ ಹತ್ತದೆ ಅಲ್ಲೇ ಉಳಿದುಕೊಂಡಿದ್ದರು. ಇದೀಗ ಮತ್ತೊಮ್ಮೆ ಬುಕ್ ಮಾಡಿದ ಟಿಕೆಟ್‌ನ್ನು ಕೊನೆಕ್ಷಣದಲ್ಲಿ ರದ್ದುಪಡಿಸಿದ್ದಾರೆ.
ಪ್ರಜ್ವಲ್ ತಮ್ಮ ವಕೀಲರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ವಕೀಲರು ನೀಡುತ್ತಿರುವ ಸೂಚನೆಗಳನ್ನು ಪ್ರಜ್ವಲ್ ಪಾಲಿಸುತ್ತಿದ್ದಾರೆ ಎನ್ನಲಾಗಿದೆ. ವಕೀಲರು ಯಾವಾಗ ಬರಲು ಹೇಳುತ್ತಾರೋ ಅಂದು ಪ್ರಜ್ವಲ್ ರಾಜ್ಯಕೆ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.
ಮಹಿಳೆ ಅಪಹರಣ ಪ್ರಕರಣದಲಿ ಬಂಧನದಲ್ಲಿದ್ದ ಶಾಸಕ ರೇವಣ್ಣಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದಂದಿನಿಂದ ರೇವಣ್ಣ ಟೆಂಪಲ್ ರನ್ ಮುಂದುವರೆಸಿದ್ದು, ಇಷ್ಟಾರ್ಥ ದೇವಾಲಯಕ್ಕೆ ಭೇಟಿ ನೀಡಿ ದೇವರ ಮೊರೆ ಹೋಗಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…