ರಾಜ್ಯ

ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಬೆಂಗಳೂರು :  ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಚ್‌.ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ.

ಹೊಳೆ ನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಪ್ರಜ್ವಲ್‌ ರೇವಣ್ಣ, ಜಾಮೀನಿಗಾಗಿ ಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್‌ ರೇವಣ್ಣರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ಪ್ರಜ್ವಲ್‌ ಗೆ ಜೈಲೇ ಗತಿಯಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

6 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

6 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

6 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

8 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

8 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

9 hours ago