ಬೆಂಗಳೂರು: ಸದಾ ತಮ್ಮ ಹೇಳಿಕೆಗಳಿಂದಲೇ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುವ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವ ಭರದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ನಾರಿಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯ ಮತ್ತು ಅಸಹ್ಯದ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೋಟೋವೊಂದನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
26 ಭಾರತೀಯ ನಾರಿಯರ ಸಿಂಧೂರವನ್ನು ಅಳಿಸಿದ್ದಕ್ಕಾಗಿ, ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ದಾಳಿಗೆ ಆಪರೇಷನ್ ಸಿಂಧೂರ ಎಂಬ ಹೆಸರನ್ನಿಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್ ಒನ್ ನೇಷನ್ ಒನ್ ಹಸ್ಬಂಡ್ ಎಂದು ಟ್ವೀಟ್ ಮಾಡಿದ್ದಾರೆ. ಮೋದಿ ಸರ್ಕಾರ ಪ್ರತಿಯೊಂದು ಮನೆಗೆ ಸಿಂಧೂರವನ್ನು ಕಳುಹಿಸಲಿದೆ. ಇದು ಒಂದು ತಿಂಗಳುಗಳ ಕಾಲ ನಡೆಯಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನೋಡಿದ ನೆಟ್ಟಿಗರು ನಟನಿಗೆ ಛೀಮಾರಿ ಹಾಕುತ್ತಿದ್ದಾರೆ.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…