ರಾಜ್ಯ

ಒನ್‌ ನೇಷನ್‌, ಒನ್‌ ಹಸ್ಬಂಡ್:‌ ಆಪರೇಷನ್‌ ಸಿಂಧೂರ್‌ ಬಗ್ಗೆ ಪ್ರಕಾಶ್‌ ರಾಜ್‌ ವಿವಾದಾತ್ಮಕ ಪೋಸ್ಟ್‌

ಬೆಂಗಳೂರು: ಸದಾ ತಮ್ಮ ಹೇಳಿಕೆಗಳಿಂದಲೇ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುವ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವ ಭರದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ನಾರಿಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆಪರೇಷನ್‌ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯ ಮತ್ತು ಅಸಹ್ಯದ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೋಟೋವೊಂದನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

26 ಭಾರತೀಯ ನಾರಿಯರ ಸಿಂಧೂರವನ್ನು ಅಳಿಸಿದ್ದಕ್ಕಾಗಿ, ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ದಾಳಿಗೆ ಆಪರೇಷನ್ ಸಿಂಧೂರ ಎಂಬ ಹೆಸರನ್ನಿಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್ ಒನ್ ನೇಷನ್ ಒನ್ ಹಸ್ಬಂಡ್ ಎಂದು ಟ್ವೀಟ್ ಮಾಡಿದ್ದಾರೆ. ಮೋದಿ ಸರ್ಕಾರ ಪ್ರತಿಯೊಂದು ಮನೆಗೆ ಸಿಂಧೂರವನ್ನು ಕಳುಹಿಸಲಿದೆ. ಇದು ಒಂದು ತಿಂಗಳುಗಳ ಕಾಲ ನಡೆಯಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನೋಡಿದ ನೆಟ್ಟಿಗರು ನಟನಿಗೆ ಛೀಮಾರಿ ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

42 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

46 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

49 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

53 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

1 hour ago