ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ.29ರಿಂದ ಫೆಬ್ರವರಿ.6ರವರೆಗೆ ನಡೆಯಲಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡುತ್ತೇನೆ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಇತ್ತೀಚೆಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ ಎಂದು ಹೇಳಿದರು.





