ರಾಜ್ಯ

ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲೆ ರೀಟೆಲ್‌ ಸೇಲ್ಸ್‌ ಟ್ಯಾಕ್ಸ್‌ ದರವನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅಸಮಾಧಾನ ಹೊರ ಹಾಕಿದ್ದಾರೆ.

ಜನರಿಗೆ ನಂಬಿಸಿ, ಉದ್ದುದ್ದ ಭಾಷಣ ಬಿಗಿಯುವ ಮೂಲಕ ಸಾರ್ವಜನಿಕರ ಕೈಗೆ ಚಂಬು ನೀಡಿದೆ ಎಂದು ಪ್ರಲ್ಹಾದ್‌ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.50 ರೂ ಗಳನ್ನು ಏರಿಕೆ ಮಾಡಿ ಶನಿವಾರ (ಜೂನ್‌.15) ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿರುವ ಬಿಜೆಪಿಯ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಮ್ಮ ಎಕ್ಸ್‌ ಖಾತೆಯಲ್ಲಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, “ಅಭಿವೃದ್ಧಿ ಕೇಳ್ಬೇಡಿ …. ತೊಗೊಳ್ರಪ್ಪ ಕೊಟ್ರು ಚೊಂಬು….. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಇಂಧನದ ಬೆಲೆ ಕಡಿಮೆ ಮಾಡಿದ್ದರೂ, ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ.

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯವನ್ನು ರಾಜ್ಯಕ್ಕೆ ನೀಡಿದ್ದು, ಅಧಿಕಾರ ವಹಿಸಿಕೊಂಡ ಕಳೆದ 1.5 ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ. ಈಗ ನೇರವಾಗಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಕಾಂಗ್ರೆಸ್” ಎಂದು ಬರೆದುಕೊಂಡು ಸರ್ಕಾರಕ್ಕೆ ಕುಟುಕಿದ್ದಾರೆ.

ಇತ್ತ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ಟ್ವೀಟ್‌ ಮಾಡಿದ್ದು, “ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ.

ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್‌ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ.

ಪೆಟ್ರೋಲ್, ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ. ಇನ್ನು ರಾಜ್ಯಾದ್ಯಂತ ಬೆಲೆ ಏರಿಕೆ ವಿರುದ್ಧ ಸಾರ್ವಜನಿಕರು, ವಾಹನ ಸವಾರರು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ ಎಂದು ಸುದೀರ್ಘವಾಗಿ ಬರೆದುಕೊಂಡು ಕಾಂಗ್ರೆಸ್‌ ನಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

3 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

3 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

4 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

4 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

5 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

13 hours ago