pralhad joshi relation about GST issue in state government
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿಎಸ್‌ಟಿ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾಸ್ ಜೋಶಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ #CGST ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ #SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದಾರೆ.
ಜಿ ಎಸ್ ಟಿ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ. ಇದೀಗ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ, ಅವರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದ ನೋಟಿಸ್, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ. ಯುಪಿಐ ಟ್ರಾನ್ಸಾಕ್ಷನ್ ಇದೀಗ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಹದಗೆಡಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿರುವುದು ನಿಜಕ್ಕೂ ದುರಂತ ಎಂದು ವಿಶ್ಲೇಷಿಸಿದ್ದಾರೆ.
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…