Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಬಿಜೆಪಿ ಇಂದು ಇಡೀ ಜಗತ್ತಿನ ಅತಿದೊಡ್ಡ ಪಕ್ಷವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಬಿಜೆಪಿ ಪಕ್ಷ ರಾಷ್ಟ್ರೀಯ ಹಿತ ಚಿಂತನೆಯ ಜೊತೆಗೆ ಭಾರತವನ್ನು ಮುನ್ನಡೆಸುತ್ತಿದೆ. ಇದರ ಫಲವಾಗಿ ಬಿಜೆಪಿ ಇಂದು ವಿಶ್ವದಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವ ಧ್ಯೇಯದೊಂದಿಗೆ ಬಿಜೆಪಿ ದಾಪುಗಾಲು ಹಾಕುತ್ತಿದೆ. ಈ ಮಹತ್ವದ ಕಾರ್ಯದಲ್ಲಿ ಯುವ ಸಮುದಾಯ ಸೇರಿದಂತೆ ಸರ್ವರೂ ಭಾಗಿ ಆಗಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯತ್ವ ಸ್ಥಾನವನ್ನು ಆರಂಭಿಸಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಸದಸ್ಯತ್ವ ಅಭಿಯಾನ ಇದೇ ಸೆಪ್ಟೆಂಬರ್.‌2ಕ್ಕೆ ಆರಂಭ ಆಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದು ರಾಷ್ಟ್ರೀಯತೆ, ಏಕತೆಯನ್ನು ಬೆಂಬಲಿಸಿ ಎಂದು ಕರೆ ನೀಡಿದರು.

Tags: