ರಾಜ್ಯ

ಏನು ಮಾಡಿಲ್ಲ ಅಂದ್ರೆ ಮೈಸೂರು ಡಿಸಿ ಯಾಕೆ ವರ್ಗಾವಣೆ ಮಾಡಿದ್ರಿ..? ಸಿಎಂಗೆ ಪ್ರಹ್ಲಾದ್ ಜೋಶಿ ಪ್ರಶ್ನೆ

ಹುಬ್ಬಳ್ಳಿ : ಏನು ಮಾಡಿಲ್ಲ ಎನ್ನುವುದಾದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಯಾಕೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಮುಡಾ ಹಗರಣ ಬಹಳ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರವಾಗಿದೆ. ಮೇಲ್ನೋಟಕ್ಕೆ ಇದು ಸ್ಪಷ್ಟವಾಗಿದೆ. ೨೦೧೭ ರಲ್ಲಿ  ಈ ನಿರ್ಣಯಗಳಾಗಿವೆ. ಸಿಎಂ ಸಿದ್ದರಾಮಯ್ಯ ಅವರ ಗಮನದಲ್ಲೆ ಆಗಿರುವ ಬಹುದೊಡ್ಡ ಹಗರಣ ಇದು ಎಂದು ಆರೋಪಿಸಿದರು.

ಅಲ್ಲದೆ ಈ ಹಗರಣದಲ್ಲಿ ೪ ಸಾವಿರ ಕೋಟಿ ಅಕ್ರಮ ಎಸಗಿರುವ ಬಗ್ಗೆ ಆರೋಪಗಳಿಗೆ. ಬಿಜೆಪಿ ಕಾಲದಲ್ಲಿ ಕೊಟ್ಟಿದ್ದು ಎನ್ನುತ್ತಾರೆ. ಈ ಅವ್ಯವಹಾರ ಆಗಿದ್ದು೨೦೧೩ ರಿಂದ ೨೦೧೮ ರವರೆಗೆ. ನೀವು ಏನು ಮಾಡಿಲ್ಲ ಅಂದ್ರೆ ಡಿಸಿ ಯಾಕೆ ವರ್ಗಾವಣೆ ಮಾಡಿದ್ದೀರಿ..? ಡಿಸಿ ಕಳೆದ ಒಂದು ವರ್ಷದಲ್ಲಿ ೧೫ ಪತ್ರ ಬರೆದಿದ್ದಾರೆ.  ಅದರಲ್ಲಿ ಸಿದ್ದರಾಮಯ್ಯ ಹಾಗೂ ಮಗನ ಜಮೀನು ವಶಪಡಿಸಿಕೊಂಡಿದ್ದಾರೆ ಎಂದರು.

ಜೊತೆಗೆ ಇದು ತಮ್ಮ ಸ್ವಂತ ಲಾಭಕ್ಕೆ ಮಾಡಿಕೊಳ್ಳಲು ಮಾಡಿರುವ ದೊಡ್ಡ ಹಗರಣ. ಸಿದ್ದರಾಮಯ್ಯ ಏನು ಮಾಡಿಲ್ಲ ಎನ್ನುವುದಾದರೆ ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

17 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago