Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಗೃಹಲಕ್ಷ್ಮೀ ಯೋಜನೆ ಹಣ ಪಡೆದ ಪ್ರಣತಿ ಪ್ರಕಾಶ್‌: ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಸಂತಸ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿ ಪ್ರಣತಿ ಪ್ರಕಾಶ್ ಅವರ ಸಂತಸದ ನುಡಿಗಳಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಣತಿ ಪ್ರಕಾಶ್‌ ಅವರಂತಹ ಅಲ್ಪಸಂಖ್ಯಾತರು ಅವಕಾಶ ಹಾಗೂ ಸೌಲಭ್ಯಗಳಿಂದ ವಂಚಿತರಾಗಿರುವ ಲಿಂಗತ್ವ ಅಲ್ಪಸಂಖ್ಯಾತರು ಆರ್ಥಿಕವಾಗಿ ಸಶಕ್ತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಆ ಮೂಲಕ ಅವರು ಎಲ್ಲರಂತೆ ಘನತೆಯ ಬದುಕು ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಕೇವಲ ಮಹಿಳೆಯರಿಗೆ ಮೀಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದೆವು. ನಮ್ಮ ನಿರ್ಧಾರ ಯಾಕೆ ಸೂಕ್ತವಾದುದ್ದು ಎಂಬುದನ್ನು ಇವರ ಮಾತುಗಳು ಪ್ರತಿಬಿಂಬಿಸುತ್ತಿವೆ ಎಂದಿದ್ದಾರೆ.

ಈ ಹಿಂದೆ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದುರ್ಬಲರಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಿಕ ಸಹಾಯಧನ ಒದಗಿಸುವ “ಮೈತ್ರಿ” ಕಾರ್ಯಕ್ರಮವನ್ನು ರೂಪಿಸಿ, ಜಾರಿಗೆ ಕೊಟ್ಟಿದ್ದೆ ಎಂದು ಹೇಳಿದ್ದಾರೆ.

ಆ ಸಂದರ್ಭದಲ್ಲಿ ಯಾವುದೇ ಜಾತಿ, ಧರ್ಮ, ಲಿಂಗ ತಾರತಮ್ಯವಿಲ್ಲದೆ ಸಮಾಜದ ದುರ್ಬಲ ವರ್ಗಗಳನ್ನು ಗುರುತಿಸಿ, ಅವರ ಜೀವನ ಸುಧಾರಿಸಲು ಚಿಕಿತ್ಸಕ ಕ್ರಮಗಳನ್ನು ಕೈಗೊಳ್ಳುವುದು ಒಂದು ಸರ್ಕಾರವಾಗಿ ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ ತೃಪ್ತಿ ನನಗಿದೆ ಎಂದು ತಿಳಿಸಿದ್ದಾರೆ.

ಪ್ರಣತಿ ಪ್ರಕಾಶ್‌ ಹೇಳಿದ್ದೇನು?

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದ ಪ್ರಣತಿ ಪ್ರಕಾಶ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಯಾಗಿರುವ ನಾನು ಗೃಹಲಕ್ಷ್ಮೀ ಯೋಜನೆಯನ್ನು ಪಡೆದಿರುವುದು ಸಂತಸದ ವಿಷಯವಾಗಿದೆ ಎಂದು ತಿಳಿಸಿದ್ದರು.

Tags: