ವಿಜಯಪುರ : ನಾಡಹಬ್ಬ ಮೈಸೂರು ದಸರಾ ಉದ್ಘಾಟಕಿ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸುತ್ತಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಈ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಇದೆಲ್ಲಾ ರಾಜಕೀಯ ಪ್ರೇರಿತ. ಸರ್ಕಾರ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡಲಿದೆ ಎಂದು ಹೇಳಿದ್ದಾರೆ.
ಈ ವಿಷಯವನ್ನು ಕೋರ್ಟ್ ತೀರ್ಮಾನಿಸಲಿ, ಆದರೆ ಈ ಹಿಂದೆ ಸಾಹಿತಿ ನಿಸ್ಸಾರ್ ಅಹ್ಮದ್ ಅವರು ಉದ್ಘಾಟಿಸುವುದನ್ನು ಯಾರು ವಿರೋಧಿಸಿರಲಿಲ್ಲ. ಟಿಪ್ಪು ಸುಲ್ತಾನ್ , ಮಿರ್ಜಾ ಇಸ್ಮಾಯಿಲ್ ಮೆರವಣಿಗೆಗಳನ್ನು ಏಕೆ ವಿರೋಧಿಸಲಿಲ್ಲ. ಬಿಜೆಪಿಯವರು ಬಾನು ಮುಷ್ತಾಕ್ ರವರು ರಾಜಕೀಯ ದುರುದ್ದೇಶದಿಂದ ನಾಡಹಬ್ಬ ಉದ್ಘಾಟಿಸುವುದನ್ನು ವಿರೋಧಿಸುತ್ತಿದ್ದು, ಸರ್ಕಾರ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡಲಿದೆ. ಬಾನು ಮುಷ್ತಾಕ್ ರವರು ಕನ್ನಡಾಂಬೆಯ ಬಗ್ಗೆ ಹೀಗಳೆದು ಮಾತನಾಡಿರುವ ಬಗ್ಗೆ ಯಾವ ಪುರಾವೆಯಿಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬುಕರ್ ಪ್ರಶಸ್ತಿ ಬಂದಿದೆ. ಆದ್ದರಿಂದ ರಾಜ್ಯ ಸರ್ಕಾರ ಸಾಹಿತಿಗಳಾದ ಬಾನು ಮುಷ್ತಾಕ್ ಹಾಗು ಅನುವಾದಿಸಿದ ದೀಪಾ ಬಸ್ತಿಯವರಿಗೆ ಸನ್ಮಾನಿಸಲಾಗಿದೆ. ಬಾನು ಮುಷ್ತಾಕ್ ರವರು ಕನ್ನಡ ಸಾಹಿತಿಯಾಗಿರುವ ಕಾರಣ ಅವರಿಂದ ದಸರಾವನ್ನು ಉದ್ಘಾಟಿಸಲಾಗುತ್ತಿದೆ ಎಂದರು.
ಇದನ್ನು ಓದಿ:ಸೋಲುವ ಹತಾಶೆಯಿಂದಲೇ ಇವಿಎಂ ಮೇಲೆ ದೋಷಾರೋಪ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ
ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ
ಬಾಗಲಕೋಟೆಯ ಮಲ್ಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿ ಪ್ರವಾಹಕ್ಕೀಡಾಗಿ ರೈತರಿಗೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯ
ಯುಕೆಪಿ ಹಂತ 3 ಕ್ಕೆ ಸಂಬಂಧಿಸಿದಂತೆ ಕೇಂದ್ರದ ಅಧಿಸೂಚನೆಗೆ ಸಂಬಂಧಪಟ್ಟ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅಧಿಸೂಚನೆಯನ್ನು ಆದಷ್ಟು ಜಾಗೃತೆಯಾಗಿ ಹೊರಡಿಸಲು ಕೇಂದ್ರದ ಮೇಲೆ ಹಲವು ಬಾರಿ ಒತ್ತಡ ಹೇರಲಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಶಿಫಾರಸ್ಸು
ಇವಿಎಂ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮತದಾನವನ್ನು ತಿರುಚಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಇವಿಎಂ ನ ಗೊಂದಲ ಹಾಗೂ ತಕರಾರುಗಳಿಗೆ ಆಸ್ಪದ ನೀಡದಿರಲು,ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು. ಪ್ರಪಂಚದ ವಿವಿಧ ದೇಶಗಳಲ್ಲಿ ಇವಿಎಂ ವ್ಯವಸ್ಥೆಯನ್ನು ತೊರೆದು, ಪುನ: ಮತಪತ್ರಗಳಿಗೆ ಮೊರೆ ಹೋಗಿವೆ ಎಂದು ತಿಳಿಸಿದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…