ರಾಜ್ಯ

ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೇ ಹೊರತು ಪ್ರಚೋದನೆ ನೀಡಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಸಂಬಂಧಿಸಿದಂತೆ ಅಂದು ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ನೀಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.24) ಈ ವಿಚಾರದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪುಂಡ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪೊಲೀಸರ ಮೇಲೆ ಆಕ್ರಮಣ ಮಾಡಿದರು. ಈ ಘಟನೆ ನಡೆದ ಬೆನ್ನಲ್ಲೇ ನಾವು ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಅಲ್ಲಿನ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು. ಹಾಗದರೆ ಇದು ಪ್ರಚೋದನಕಾರಿನಾ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನನ್ನ ವಿರುದ್ಧ ಅನೇಕ ಎಫ್‌ಐಆರ್‌ಗಳು ದಾಖಲಾಗಿವೆ. ಅಂತೆಯೇ ಇದೀಗ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಇದೇ ರೀತಿ ನನ್ನ ವಿರುದ್ಧ ಸಾಲು ಸಾಲು ಎಫ್‌ಐಆರ್‌ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಬೇಕು, ಮನೆಯಿಂದ ಹೊರಬರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಅಂದಿನ ದಿನ ಮುಸ್ಲಿಮರು ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಅಂದಿದ್ದೇನೆ ಇದು ಪ್ರಚೋದನಕಾರಿನಾ? ಅವರ ಜನಸಂಖ್ಯೆ ನೋಡಿದರೆ ತಿಳಿಯುತ್ತದೆ. ನಿಮ್ಮ ಮನೆಯಲ್ಲಿ 1 ರಿಂದ 2 ಮಕ್ಕಳಿರೋ ಎಷ್ಟು ಜನ ಇದ್ದಾರೆ ಹೇಳಿ. ಶಾರುಖ್‌ ಖಾನ್‌ಗೆ ಮೂರು ಮಕ್ಕಳಿದ್ದರೆ, ಸೈಫ್ ಅಲಿ ಖಾನ್‌ಗೆ 4 ಮಕ್ಕಳಿದ್ದಾರೆ, ನಿಮ್ಮ ಸೆಲೆಬ್ರಿಟಿಗಳೇ ಕಂಟ್ರೋಲ್ ಇಲ್ಲದೆ ಮಕ್ಕಳು ಹುಟ್ಟಿಸುತ್ತಿದ್ದಾರೆ. ನಾನು ಸತ್ಯ ಹೇಳಿದ್ದು, ಜನೋತ್ಪಾದನೆಯಲ್ಲಿ ತೊಡಗಿದ್ದೀರಿ ಎಂದು ಹೇಳಿದ್ದೇನೆ. ಮುಸಲ್ಮಾನರೇ ತಮ್ಮ ಮಕ್ಕಳನ್ನು ದೇವರು ಕೊಟ್ಟನೆಂದು ಹೇಳುತ್ತಾರೆ. ಹಾಗಾದರೆ ನಿಮ್ಮ ಮಕ್ಕಳನ್ನು ದೇವರೇ ನೋಡಿಕೊಳ್ಳಲಿ, ಸರ್ಕಾರ ಯಾಕೆ ಪುಕ್ಕಟ್ಟೆಯಾಗಿ ನೋಡಿಕೊಳ್ಳಬೇಕು. ಅಲ್ಲದೇ ರಾಜ್ಯ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿಸುವವರು ಹಿಂದೂಗಳು. ಹೀಗಿದ್ದರೂ ಸೌಲಭ್ಯಗಳು ಮಾತ್ರ ಮುಸಲ್ಮಾನರಿಗೆ ಸಿಗುತ್ತಿವೆ. ರಾಜ್ಯದಲ್ಲಿ ಸಂಖ್ಯೆ ಬಲ ಅಧಿಕ ಮಾಡಿ ತೊಂದರೆ ನೀಡುತ್ತಿದ್ದಾರೆ. ಭಯದ ವಾತಾವರಣ ಸೃಷ್ಟಿ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದೇನೆ.

ಇನ್ನು ಸ್ವಾತಂತ್ರ್ಯ ಬಂದಾಗ ಜನಸಂಖ್ಯೆ ಎಷ್ಟಿತ್ತು, ಈಗ ಎಷ್ಟಿದ್ದೀರಿ? ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗಿದೆ. ಸತ್ಯ ಹೇಳಿರೋದು ಪ್ರಚೋದನೆ ಹೇಗಾಗುತ್ತೆ? ನಿಯಂತ್ರಣದಿಂದ ಮಕ್ಕಳು ಹುಟ್ಟಿಸಿ, ಅವರಿಗೆ ವಿದ್ಯಾಭ್ಯಾಸ ನೀಡಿ ಎಂದು ಕಿವಿ ಮಾತು ಹೇಳಿದ್ದೇನೆ. ನಿಮ್ಮ ಶಕ್ತಿಗನುಸಾರವಾಗಿ ಮಕ್ಕಳು ಹುಟ್ಟಿಸಿ ಎಂದು ಹೇಳಿದ್ದೇನೆ. ಇದು ಪ್ರಚೋದನಕಾರಿ ಹೇಳಿಕೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಇದ್ದೂ ಇಲ್ಲದಂತಿರುವ ಟರ್ಷಿಯರಿ ಕ್ಯಾನ್ಸರ್‌ ಕೇರ್‌

ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…

19 mins ago

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

3 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

3 hours ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

3 hours ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

3 hours ago