ಬೆಳಗಾವಿ: ಬಿಜೆಪಿ ಪಕ್ಷದಲ್ಲಿ ಯತ್ನಾಳ್ ಅವರು ಕೂಡ ಒಬ್ಬ ಜನಪ್ರಿಯ ನಾಯಕರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರು ವಕ್ಫ್ ಮಂಡಳಿ ವಿರುದ್ಧ ಜನರಿಗೆ ಜಾಗೃತಿ ಮೂಡಿಸಲು ಹೋರಾಟ ನಡೆಸುತ್ತಿದ್ದಾರೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನ.20 ರಂದು ಸುದ್ದಿಗೋಷ್ಠಿ ನಡೆಸಿ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಅದರಂತೆಯೇ ಯತ್ನಾಳ್ ಅವರು ಬಿಜಾಪುರದಲ್ಲಿ ಹೋರಾಟವನ್ನು ಪ್ರಾರಂಭಿಸಿದ್ದಾರೆ. ಆ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಭಾಗವಹಿಸಿದ್ದರು. ಹೀಗಾಗಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಅಪಸ್ವರ ಬಣ ಹೋರಾಟ ಎಂದು ಅಪ್ರಸ್ತುತ ಆಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಯತ್ನಾಳ್ ಅವರ ನೇತೃತ್ವದಲ್ಲಿ ವಕ್ಫ್ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದೆ. ಆದರೆ ಯತ್ನಾಳ್ ಅವರ ಈ ಪ್ರತಿಭಟನೆಗೆ ಪಕ್ಷದಲ್ಲಿ ಯಾಕೆ ಅಪಸ್ವರ ಬರುತ್ತಿದೆ ಎಂಬುಂದು ನನಗೆ ತಿಳಿಯುತ್ತಿಲ್ಲ. ಹೀಗಾಗಿ ಹೋರಾಟದ ದಿಕ್ಕು ತಪ್ಪಿಸುವವರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ವಕ್ಫ್ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…