Mysore
14
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ : ಕತ್ತಲಗೆರೆ ಗ್ರಾಮದಲ್ಲಿ ಇಂದು ಪ್ರತಾಪ್ ಕುಮಾರ್ ಅಂತ್ಯಕ್ರಿಯೆ

ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್‌ ಅಳಿಯ ಪ್ರತಾಪ್‌ ಕುಮಾರ್‌ ಕೆ.ಜಿ ಆತ್ಮಹತ್ಯೆ ಪ್ರಕರಣ ಇಂದು ಹುಟ್ಟೂರು ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದಲ್ಲಿ ಪ್ರತಾಪ್‌ ಕುಮಾರ್‌ ಅಂತ್ಯಕ್ರಿಯೆ ನಡೆಯಲಿದೆ.

ಕತ್ತಲಗೆರೆ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ೧ ಗಂಟೆಗೆ ವಿಧಿವಿಧಾನದಂತೆ  ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.  ಬಿ.ಸಿ. ಪಾಟೀಲ್‌ ಅವರ ದೊಡ್ಡ ಮಗಳ ಗಂಡ ಪ್ರತಾಪ್‌ ಕುಮಾರ್‌ ನಿನ್ನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು. ಇದನ್ನ ಗಮನಿಸಿದ ಸ್ಥಳೀಯರು ಆಸ್ಪತ್ರೆಗೆ ಪ್ರತಾಪ್‌ ನನ್ನ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್‌ ಕುಮಾರ್‌ ಮೃತಪಟ್ಟಿದ್ದಾರೆ.

Tags:
error: Content is protected !!