Mysore
26
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

ಪ್ರವೀಣ್‌ ನೆಟ್ಟಾರು ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಎನ್‌ಐಎ

ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಪ್ರಕರಣದ ನಾಲ್ಕನೇ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ ಸೇರಿದಂತೆ ಮೂವರನ್ನು ಬಂಧಿಸಿದೆ.

ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಸುಳ್ಯದ ಮೊಹಮ್ಮದ್‌ ಮುಸ್ತಾಫ ಅಲಿಯಾಸ್‌ ಮುಸ್ತಾಫ ಪೈಚಾರ್‌, ಸೋಮವಾರಪೇಟೆಯ ಇಲಿಯಾಸ್‌ ಹಾಗೂ ಆನೆಮಹಲ್‌ನ ಸಿರಾಜ್‌ ಎಂಬುವವರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಮೊಹಮ್ಮದ್‌ ಮುಸ್ತಾಫ ಮತ್ತು ಇಲಿಯಾಸ್‌ ಆನೆಮಹಲ್‌ನ ಸಿರಾಜ್‌ ಬಳಿ ಕೆಲಸಕ್ಕೆ ಸೇರಿಕೊಂಡಿದ್ದರು. ಇವರಿಗೆ ಆಶ್ರಯ ನೀಡಿದ ಆರೋಪದಡಿಯಲ್ಲಿ ಸಿರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ಸುಳ್ಯದ ಮೊಹಮ್ಮದ್‌ ಮುಸ್ತಾಫ ಅಲಿಯಾಸ್‌ ಮುಸ್ತಾಫ ಪೈಚಾರ್‌ ಪ್ರವೀಣ್‌ ನೆಟ್ಟಾರು ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದನು.

Tags:
error: Content is protected !!