ನವದೆಹಲಿ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ದೇಶದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಈ ಕುರಿತು ಇಂದು(ಡಿ.5) ಎನ್‌ಐಎ ಅಧಿಕಾರಿಗಳು ಬೆಂಗಳೂರು, ಕೊಡಗು, ಚೈನ್ನೈ, ಎರ್ನಾಕುಲಂ ಸೇರಿದಂತೆ ದೇಶದ 16 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ.
ಎನ್‌ಐಎ ದಾಳಿ ನಡೆಸಲು ಕಾರಣವೇನು?
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ 2022ರ ಜುಲೈನಲ್ಲಿ ಪ್ರವೀಣ್ ನೆಟ್ಟಾರು ಎಂಬುವವರನ್ನು ಪಾಪ್ಯುಲರ್ ಆಫ್ ಇಂಡಿಯಾದ ಇಬ್ಬರು ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಬಂದು ಹತ್ಯೆ ಮಾಡಿದ್ದರು. ಹೀಗಾಗಿ ಈ ಹತ್ಯೆ ಪ್ರಕರಣವನ್ನು ಎನ್‌ಐಎ ಸಂಸ್ಥೆಯೂ ತನಿಖೆಯನ್ನು 2024ರ ಆಗಸ್ಟ್ 4ರಂದು ಕೈಗೆತ್ತಿಕೊಂಡು ಇಲ್ಲಿಯವರೆಗೂ 19 ಆರೋಪಿಗಳನ್ನು ಬಂಧಿಸಿದೆ. ಬಳಿಕ 21 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇನ್ನು ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ದೇಶದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಎನ್‌ಐಎ ಹೇಳಿದೆ.
ಎನ್‌ಎಎ ತನಿಖೆಯಿಂದ ಕೊಡಗು ಜಿಲ್ಲೆಯ ನಿವಾಸಿಯಾಗಿರುವ ತುಫೈಲ್ ಎಂಬುವವನು ಪಿಎಫ್‌ಐ ಸೇವಾ ತಂಡಗಳ ಉಸ್ತುವಾರಿ ಹಾಗೂ ನಿಷೇಧಿತ ಸಂಘಟನೆಯ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ಸೇರಿದಂತೆ ಸುಧಾರಿತ ತರಬೇತಿಯನ್ನು ನಿಯಮಿತವಾಗಿ ನೀಡುವ ಪಿಎಫ್‌ಐ ಮಾಸ್ಟರ್ ಟ್ರೈನರ್ ಆಗಿದ್ದ ಎಂದು ವರದಿಯಲ್ಲಿ ತಿಳಿಸಿದೆ. ಅಲ್ಲದೇ ಕರ್ನಾಟಕದ ರಾಜ್ಯದ ಮೈಸೂರು, ಕೊಡಗು ಹಾಗೂ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯಲ್ಲಿ ನೆಟ್ಟಾರುವಿನ ಮೂವರು ದಾಳಿಕೋರರಿಗೆ ಆಶ್ರಯ ನೀಡಿದ್ದ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.





