Mysore
29
few clouds

Social Media

ಮಂಗಳವಾರ, 27 ಜನವರಿ 2026
Light
Dark

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿ ಬಂಧನ

Praveen Nettaru murder case Accused arrested

ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್‌ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ ತಲೆ ಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು.

ಅಬ್ದುಲ್ ರೆಹಮಾನ್ ಪಿಎಫ್‌ಐ ಸಂಘಟನೆಯ ಕಾರ್ಯದರ್ಶಿಯಾಗಿದ್ದ. ರೆಹಮಾನನ್ನು ವಶಕ್ಕೆ ಪಡೆದಿರುವ ಎನ್‌ಐಎ ಅಽಕಾರಿಗಳು ಬೆಂಗಳೂರಿನ ಎನ್‌ಐಎನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

Tags:
error: Content is protected !!