Praveen Nettaru murder case Accused arrested
ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್‌ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ ತಲೆ ಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು.
ಅಬ್ದುಲ್ ರೆಹಮಾನ್ ಪಿಎಫ್‌ಐ ಸಂಘಟನೆಯ ಕಾರ್ಯದರ್ಶಿಯಾಗಿದ್ದ. ರೆಹಮಾನನ್ನು ವಶಕ್ಕೆ ಪಡೆದಿರುವ ಎನ್‌ಐಎ ಅಽಕಾರಿಗಳು ಬೆಂಗಳೂರಿನ ಎನ್‌ಐಎನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…