ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್ ಪಾಯಿಂಟ್ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್‌ಗೆ ಪ್ರಸಿದ್ಧಿ ಪಡೆದಿರುವ ಕೆಎಂಎಫ್ ಘೋಷಿಸಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಜರುಗುತ್ತಿರುವ 2025ರ ಮಹಾ ಕುಂಭಮೇಳವೂ ಇಂದಿನಿಂದ(ಜನವರಿ.13) ಪ್ರಾರಂಭವಾಗಿ ಫೆಬ್ರವರಿ.26ರವರೆಗೆ ನಡೆಯಲಿದೆ. ಹೀಗಾಗಿ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ನಂದಿನಿ ಬ್ರಾಂಡ್‌ನ ಹಾಲು ಹಾಗೂ ಯುಎಚ್‌ಟಿ ಗುಡ್‌ಲೈಫ್ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಚಾಯ್ ಪಾಯಿಂಟ್ ಸಂಸ್ಥೆಯೊಂದಿಗೆ ಪಾಲುದಾರಿಕೆಯನ್ನು ಹೊಂದಿರುವುದಾಗಿ ಘೋಷಿಸಿದೆ.
ಚಾಯ್ ಪಾಯಿಂಟ್ ಭಾರತ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ 2025ರಲ್ಲಿ ಪಾನೀಯ ಮಾರಾಟ ವ್ಯವಹಾರದಲ್ಲಿ ಅಗ್ರಸ್ಥಾನದಲ್ಲಿದೆ. ಈ ಸಂಸ್ಥೆಯೂ ಮಹಾ ಕುಂಭಮೇಳದಲ್ಲಿ ಆಯೋಜಿಸಲಾಗಿರುವ ಸಂಕೀರ್ಣದಲ್ಲಿ ಸುಮಾರು 10 ಸಂಖ್ಯೆ ಮಳಿಗೆಗಳನ್ನು ತೆರೆದಿದೆ. ಅಲ್ಲದೇ ಸದರಿ ಮಳಿಗೆಗಳ ಮೂಲಕ ಮಹಾ ಕುಂಭಮೇಳದಲ್ಲಿ ಭಾಗವಹಿಸುವ ಪ್ರವಾಸಿಗರಿಗೆ ಒಂದು ಕೋಟಿ ಕಪ್‌ಗಳಿಗಿಂತಲೂ ಅಧಿಕ ಚಹಾವನ್ನು ತಯಾರಿಸಿ, ಒದಗಿಸಲು ಸಿದ್ಧತೆ ಮಾಡಿಕೊಂಡಿದೆ.
ಈ ಸಮಾರಂಭದಲ್ಲಿ ಅತೀ ಹೆಚ್ಚು ಕಪ್ ಚಹಾವನ್ನು ಮಾರಾಟ ಮಾಡಿ ಗಿನ್ನೀಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ಗುರಿಯನ್ನು ಸಹ ಹೊಂದಿದೆ. ಮಹಾ ಕುಂಭ ಮೇಳದಲ್ಲಿ ಸಿದ್ಧಪಡಿಸಲಾಗುವ ಪ್ರತಿಯೊಂದು ಕಪ್ ಚಹಾವು ನಂದಿನಿಯ ಪರಿಶುದ್ಧ ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲನ್ನು ಬಳಸಿ ತಯಾರಿಸಲಾಗುತ್ತದೆ. ಚಹಾದ ಜೊತೆಗೆ ಮೆಚಾಯ್ ಪಾಯಿಂಟ್ ಮಳಿಗೆಗಳು ಸಿಹಿ ಉತ್ಪನ್ನ ಮತ್ತು ಮಿಲ್ಕ್ ಶೇಕ್ ಗಳು ಸೇರಿದಂತೆ ನಂದಿನಿ ಉತ್ಪನ್ನಗಳನ್ನು ಸಹ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…