Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಜನವರಿ.7 ರಿಂದ ಬಜೆಟ್‌ ಪೂರ್ವಭಾವಿ ಸಭೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ಅನ್ನು ಮಾರ್ಚ್‌ ತಿಂಗಳಿನಲ್ಲಿ ಮಂಡಿಸಲಿದ್ದು, ಬಜೆಟ್‌ನ ಪೂರ್ವಭಾವಿ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ ನೀಡಲಿದ್ದಾರೆ.

ಸಿದ್ದರಾಮಯ್ಯ ಅವರು ಬಜೆಟ್‌ ಪೂರ್ವಭಾವಿ ಸಭೆಗೆ ಅಧಿಕೃತವಾಗಿ ಜನವರಿ.7(ನಾಳೆಯಿಂದ) ಚಾಲನೆ ನೀಡಲಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ಬಜೆಟ್‌ನಲ್ಲಿ ಅಳವಡಿಸಿಕೊಳ್ಳಬೇಕಾದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಅಧಿಕಾರಗಳೊಂದಿಗೆ ಚರ್ಚಿಸಲಿದ್ದಾರೆ.

ಇನ್ನೂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಹಾಗೂ ಸಂಜೆ 4 ಗಂಟೆಗೆ ತಲಾ ಒಂದೊಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸಮಾಜ ಕಲ್ಯಾಣ, ಆರೋಗ್ಯ ಇಲಾಖೆ, ಬುಧವಾರ ಆಹಾರ, ಉನ್ನತ ಶಿಕ್ಷಣ, ಗುರುವಾರ ವೈದ್ಯಕೀಯ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಿಗಧಿಯಾಗಿದೆ.

ಈಗಾಗಲೇ ಮುಖ್ಯಮಂತ್ರಿ ಸಚಿವಾಲಯದಿಂದ ಹಿಂದಿನ ಎರಡು ವರ್ಷಗಳು ಬಜೆಟ್‌ ಕಂಡಿಕೆಗಳು ಕೈಗೊಂಡ ಕ್ರಮ, ಆರ್ಥಿಕ ಮತ್ತು ಭೌತಿಕ ಪ್ರಗತಿ ಹಾಗೂ ಇಲಾಖೆಯಿಂದ ಕೈಗೊಳ್ಳಬಹುದಾದ ಹೊಸ ಯೋಜನೆಗಳ ಕುರಿತು ಪ್ರಾತ್ಯಕ್ಷಿಕೆ ಸಿದ್ಧಪಡಿಸಿ ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಮುಂದಿನ ಆರ್ಥಿಕ ವರ್ಷದ ಬಜೆಟ್‌ ಸಿದ್ಧತೆಗೆ ಆದ್ಯತಾ ಪಟ್ಟಿಯನ್ನು ಸಿದ್ಧಪಡಿಸು ಪ್ರಕ್ರಿಯೆಯೂ ಪ್ರಾರಂಭಗೊಂಡಿದೆ.

Tags:
error: Content is protected !!