ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ಅನ್ನು ಮಾರ್ಚ್ ತಿಂಗಳಿನಲ್ಲಿ ಮಂಡಿಸಲಿದ್ದು, ಬಜೆಟ್‌ನ ಪೂರ್ವಭಾವಿ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ ನೀಡಲಿದ್ದಾರೆ.
ಸಿದ್ದರಾಮಯ್ಯ ಅವರು ಬಜೆಟ್ ಪೂರ್ವಭಾವಿ ಸಭೆಗೆ ಅಧಿಕೃತವಾಗಿ ಜನವರಿ.7(ನಾಳೆಯಿಂದ) ಚಾಲನೆ ನೀಡಲಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ಬಜೆಟ್‌ನಲ್ಲಿ ಅಳವಡಿಸಿಕೊಳ್ಳಬೇಕಾದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಅಧಿಕಾರಗಳೊಂದಿಗೆ ಚರ್ಚಿಸಲಿದ್ದಾರೆ.
ಇನ್ನೂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಹಾಗೂ ಸಂಜೆ 4 ಗಂಟೆಗೆ ತಲಾ ಒಂದೊಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸಮಾಜ ಕಲ್ಯಾಣ, ಆರೋಗ್ಯ ಇಲಾಖೆ, ಬುಧವಾರ ಆಹಾರ, ಉನ್ನತ ಶಿಕ್ಷಣ, ಗುರುವಾರ ವೈದ್ಯಕೀಯ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಿಗಧಿಯಾಗಿದೆ.
ಈಗಾಗಲೇ ಮುಖ್ಯಮಂತ್ರಿ ಸಚಿವಾಲಯದಿಂದ ಹಿಂದಿನ ಎರಡು ವರ್ಷಗಳು ಬಜೆಟ್ ಕಂಡಿಕೆಗಳು ಕೈಗೊಂಡ ಕ್ರಮ, ಆರ್ಥಿಕ ಮತ್ತು ಭೌತಿಕ ಪ್ರಗತಿ ಹಾಗೂ ಇಲಾಖೆಯಿಂದ ಕೈಗೊಳ್ಳಬಹುದಾದ ಹೊಸ ಯೋಜನೆಗಳ ಕುರಿತು ಪ್ರಾತ್ಯಕ್ಷಿಕೆ ಸಿದ್ಧಪಡಿಸಿ ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಮುಂದಿನ ಆರ್ಥಿಕ ವರ್ಷದ ಬಜೆಟ್ ಸಿದ್ಧತೆಗೆ ಆದ್ಯತಾ ಪಟ್ಟಿಯನ್ನು ಸಿದ್ಧಪಡಿಸು ಪ್ರಕ್ರಿಯೆಯೂ ಪ್ರಾರಂಭಗೊಂಡಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…