Mysore
28
broken clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಇಂದಿನಿಂದ ಬಜೆಟ್‌ ಪೂರ್ವಭಾವಿ ಸಭೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದಿನಿಂದ 2025-26ನೇ ಸಾಲಿನ ಬಜೆಟ್‌ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ.

ಕೆಲ ಎರಡು ದಿನಗಳಿಂದ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿದ್ದ ಸಿಎಂ, ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ, ಮಾರ್ಚ್‌ ಮೊದಲ ವಾರದಲ್ಲಿ ಬಜೆಟ್‌ ಮಂಡನೆ ಮಾಡುವ ಸಾಧ್ಯತೆ ಇರುವ ಕಾರಣ ಇಂದಿನಿಂದ ಕಾವೇರಿ ನಿವಾಸದಲ್ಲಿ ವಿವಿಧ ಇಲಾಖೆಗಳೊಂದಿಗೆ ಬಜೆಟ್‌ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಮಾರ್ಚ್‌ ಮೊದಲ ವಾರದಲ್ಲಿ ಬಜೆಟ್‌ ಮಂಡನೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ದಿನಾಂಕ ನಿಗದಿಯಾಗಲಿದೆ.

Tags:
error: Content is protected !!