ರಾಜ್ಯ

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಮುಂದಿನ 7 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಮುಂದಿನ 7 ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದುವರಿಯಲಿದೆ, ಇದರ ಬೆನ್ನಲ್ಲೆ ಮುಂಗಾರು ಮಳೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಭೀಕರ ಬಿರುಗಾಳಿ ಬೀಸಲಿದೆ. ಇದರೊಂದಿಗೆ ಪ್ರಾಣಾಂತಿಕ ಗುಡುಗು ಮತ್ತು ಮಿಂಚು ಸಹಿತ ಆರ್ಭಟ ಇರಲಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮೇ.26ರ ಹೊತ್ತಿಗೆ ಮುಂಗಾರು ಮಳೆಯ ಮಾರುತಗಳು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ. ಅವಧಿಗೂ ಮುನ್ನವೇ ಅಂದರೆ ಇನ್ನು ಹತ್ತೇ ದಿನಗಳಲ್ಲಿ (ಮೇ ಕೊನೆ ವಾರ) ಮುಂಗಾರಿನ ಅಧಿಕೃತ ಪ್ರವೇಶವಾಗಲಿದೆ ಎನ್ನಲಾಗಿದೆ. ಹೇಗೆಂದರೆ 3-4 ದಿನಗಳಲ್ಲಿ ಆಗ್ನೆಯ ಅರೇಬಿಯನ್ ಸಮುದ್ರ, ನೈಋತ್ಯ ಮತ್ತು ಆಗ್ನೆಯ ಬಂಗಾಳಕೊಲ್ಲಿಯ ಕೆಲವು ಭಾಗಗಳು ಮಾತ್ರವಲ್ಲದೇ ಅಂಡಮಾನ್ ದ್ವಿ?ಪಗಳು ಮತ್ತು ಅಂಡಮಾನ್ ಸಮುದ್ರದ ಭಾಗಗಳಲ್ಲಿ ಮುಂಗಾರು ಆಗಮಿಸಲು ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಿವಿಧ ಭಾಗಗಳಲ್ಲಿ ಅನುಕೂಲಕರ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಮೇ.16ರಂದು ಕಂಡು ಬಂದಿದ್ದ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 4.5 ಕಿ.ಮೀವರೆಗೆ ವಿಸ್ತರಿಸಿದೆ. ಇದು ಇನ್ನಷ್ಟು ತೀವ್ರಗೊಳ್ಳಲೂಬಹುದು. ಇದು ಉತ್ತರ ಕರಾವಳಿ ತಮಿಳುನಾಡು ಮತ್ತಿತರ ಪ್ರದೇಶಗಳಲ್ಲಿ ಮೇಲೆ ಪ್ರಭಾವ ಬೀರುತ್ತದೆ. ವಿದರ್ಭ ಪ್ರದೇಶದಲ್ಲೂ ವಾಯು ಚಂಡಮಾರುತದ ಪರಿಚಲನೆಯು (1.5 ಕಿಮೀ) ಮುಂದುವರೆದಿದೆ.

ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಬಾಳೆಹೊನ್ನೂರು, ಮಂಗಳೂರು, ಆಗುಂಬೆ, ಮೂಡಿಗೆರೆ, ಕೊಪ್ಪಳದಲ್ಲಿ ಸಾಧಾರಣ ಮಳೆ ಆಗಿದೆ. ಉತ್ತರ ಕರ್ನಾಟಕದ ಒಂದಷ್ಟು ಕಡೆಗಳಲ್ಲಿ ಹಗುರ ಮಳೆ ಆಗಿದ್ದರೆ, ಬೆಂಗಳೂರಿನಲ್ಲಿ ನೆನ್ನೆ ಇಡೀ ದಿನ ಮಬ್ಬು ಕವಿದಿತ್ತು. ಮುಂದಿನ 7 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ.

ಇಂದಿನಿಂದ 3-5 ದಿನ ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ದಿನ ಭಾರೀ ಮಳೆ ಆಗಲಿದ್ದು, ಪ್ರತ್ಯೇಕ ದಿನಗಳಲ್ಲಿ ಆಯಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ ಇದೆ. ಈ ಭಾಗದಲ್ಲಿ ಶನಿವಾರದವರೆಗೂ ಅಧಿಕ ಬಿಸಿಲು, ಒಣಹವೆ ಕಂಡು ಬಂದಿದ್ದು, ಇದೀಗ ಮಳೆಯ ವಾತಾವರಣ ಕಂಡು ಬರುತ್ತದೆ.

 

ಆಂದೋಲನ ಡೆಸ್ಕ್

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

2 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

2 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

3 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

3 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

3 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

6 hours ago