ರಾಜ್ಯ

ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ: ಇಳಿಕೆಯಾಗುತ್ತಿರುವ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು ಗಣನೀಯವಾಗಿ ಕಡಿಮೆಯಾಗುತ್ತಿದೆ.

ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಪ್ರಮುಖ ನಗರ, ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಶೇ.44ಕ್ಕೆ ಇಳಿದಿದೆ. ಜಲಾಶಯಗಳ ನೀರು ಕಡಿಮೆಯಾಗುತ್ತಿರುವುದರಿಂದ ಬೇಸಿಗೆ ಬೆಳೆಗಳಿಗೆ ನೀರಿನ ಅಭಾವ ತಲೆದೋರತೊಡಗಿದೆ. ಅಲ್ಲದೆ ಕುಡಿಯುವ ನೀರಿಗೂ ತೊಂದರೆಯಾಗುವ ಸಾಧ್ಯತೆಗಳಿವೆ.

ಕಳೆದ ವರ್ಷ ಮುಂಗಾರು ಮಳೆ ಚೆನ್ನಾಗಿ ಬಿದ್ದ ಪರಿಣಾಮ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಆದರೆ ಬಯಲುಸೀಮೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದ ಪರಿಣಾಮ ಅಂತರ್ಜಲ ಕುಸಿತ ತೀವ್ರಗೊಂಡಿದ್ದು, ಈಗಾಗಲೇ ಹಲವು ಕಡೆಗಳಲ್ಲಿ ಕೊಳವೆ ಬಾವಿಗಳು ಬತ್ತತೊಡಗಿದ್ದು, ಕೃಷಿ ಹಾಗೂ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಿನ್ನೆಯವರೆಗೆ, ಕೆಆರ್‍ಎಸ್ ಜಲಾಶಯದಲ್ಲಿ ಪ್ರಸ್ತುತ ಶೇ.44 ರಷ್ಟು ಮಾತ್ರ ನೀರಿನ ಸಂಗ್ರಹವಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಒಂದು ಟಿಎಂಸಿಗಿಂತಲೂ ಹೆಚ್ಚು ನೀರು ಈ ಬಾರಿ ಕಡಿಮೆಯಿದೆ. 21.64 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 22.19 ಟಿಎಂಸಿಯಷ್ಟು ನೀರಿನ ಸಂಗ್ರಹವಿತ್ತು. ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ನೀರಿನ ಬಳಕೆಯೂ ಗಣನೀಯವಾಗಿ ಹೆಚ್ಚಾಗುತ್ತಿದೆ. 124.80 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್‍ಎಸ್‌ನಲ್ಲಿ 98 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ.

ಸದ್ಯಕ್ಕೆ ಕುಡಿಯುವ ನೀರಿಗೆ ತೊಂದರೆಯಾಗದಿದ್ದರೂ ಬೇಸಿಗೆ ಮಳೆ ಸಾಕಷ್ಟು ಪ್ರಮಾಣದಲ್ಲಿ ಬಾರದೆ ಬಿಸಿಲಿನ ತೀವ್ರತೆ ಇದೇ ರೀತಿ ಮುಂದುವರೆದರೆ ನೀರಿನ ಸಂಕಷ್ಟ ಎದುರಾಗುವುದರಲ್ಲಿ ಆಶ್ಚರ್ಯವಿಲ್ಲ.

ಕಬಿನಿ ಜಲಾಶಯದಲ್ಲಿ 7.16 ಟಿಎಂಸಿ ನೀರಿದ್ದು, ಕಳೆದ ವರ್ಷ 9.81 ಟಿಎಂಸಿ ಅಡಿಯಷ್ಟು ನೀರಿದೆ. ಒಟ್ಟು 4 ಜಲಾಶಯಗಳಿಂದ 49.93 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಿದೆ.

ಬೇಸಿಗೆಯಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದ್ದರೂ ವ್ಯಾಪಕವಾಗಿ ಮಳೆಯಾಗದ ಪರಿಣಾಮ ಏರಿರುವ ತಾಪಮಾನ ತಗ್ಗಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಜಲಾಶಯದ ಒಳಹರಿವು ಹೆಚ್ಚಳವಾಗುವುದಿಲ್ಲ. ಮುಂಗಾರು ಪ್ರಾರಂಭವಾಗುವ ಜೂನ್‍ವರೆಗೂ ಜಲಾಶಯಗಳಿಗೆ ನೀರು ಹರಿದುಬರುವ ಸಾಧ್ಯತೆ ವಿರಳವಾಗಿದೆ.

 

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago