Mysore
15
clear sky

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

lkg and ukg educations in anganawadis

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಂಗನವಾಡಿಯಲ್ಲಿ ಆರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಚಿಲಿಪಿಲಿ 2.0 ಪಠ್ಯಕ್ರಮ ಆಳವಡಿಕೆ, ಶಿಕ್ಷಣ ಇಲಾಖೆಯ ಪೂರ್ವ ಪ್ರಾಥಮಿಕ ತರಗತಿಗಳಿಗೆ ಈಗಾಗಲೇ ದಾಖಲಾಗಿರುವ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ, ತೂಕ ಮತ್ತು ಅಳತೆ ಬಗ್ಗೆಯೂ ಗಮನಹರಿಸಬೇಕು ಎಂದು ಉಭಯ ಸಚಿವರು ಚರ್ಚೆ ನಡೆಸಿದರು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಬ್ಬರು ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ.ಟಿ.ಎಚ್.ವಿಶ್ವನಾಥ್, ಕಿಶೋರ್ ಕುಮಾರ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಎರಡು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!