ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ಈ ಮರ್ಯಾದಾ ಹತ್ಯೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
ಈ ಘಟನೆ ಜಾತಿ ಆಧಾರಿತ ಮದುವೆಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ. ಹತ್ಯೆಯಾಗಿರುವ ಮಹಿಳೆಯನ್ನು ಮಾನ್ಯಾ ಪಾಟೀಲ್ ಎಂದು ಗುರುತಿಸಲಾಗಿದೆ.
ಇದನ್ನು ಓದಿ: ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು
ಈ ಸಂಬಂಧ ದಲಿತ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಧಿಕ್ಕಾರ, ಧಿಕ್ಕಾರ, ಬೇಕು ಬೇಕು ನ್ಯಾಯ ಬೇಕು, ಜಸ್ಟಿಸ್ ಫಾರ್ ಮಾನ್ಯಾ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮರ್ಯಾದಾ ಹತ್ಯೆಗೆ ಕಾರಣರಾದವರನ್ನು ಬಂಧಿಸುವಂತೆ ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.
ದಲಿತ ವಿರೋಧಿಗಳಿಗೆ, ಜಾತಿವಾದಿಗಳಿಗೆ ಮತ್ತು ಜಾತಿ ರಾಕ್ಷಸರಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗುವ ಮೂಲಕ ಘಟನೆಯ ಬಗ್ಗೆ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 7 ತಿಂಗಳ ಗರ್ಭಿಣಿಯ ಹತ್ಯೆಯನ್ನು ಖಂಡಿಸಿ, ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.




