ಬೆಂಗಳೂರು: ಈ ಬಾರಿ ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ರೀತಿಯಲ್ಲೂ ವ್ಯವಸ್ಥೆ ಮಾಡಿಕೊಳ್ಳಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿ ಹಾಗೂ ಸಾಹಿತ್ಯ ಸಮ್ಮೇಳನದ ಪಧಾಧಿಕಾರಿಗೆ ಸೂಚಿಸಿದರು.
ಅವರು ಇಂದು(ಜೂ.28) ಬೆಂಗಳೂರಿನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಯಾವುದೇ ಲೋಪದೋಷ ಕಂಡು ಬರದ ರೀತಿ ನೋಡಿಕೊಳ್ಳಿ, ಜೊತೆಯೆ ವಿವಿಧ ಸಮಿತಿಗಳ ರಚನೆಗೆ ಕ್ರಮಕೈಗೊಳ್ಳಿ ಎಂದು ಹೇಳಿದರು.
ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ; ಹೆಚ್.ಎಲ್ ನಾಗರಾಜು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…