ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ತನಿಖೆ ನಡೆಸಲು ಈಗಾಗಲೇ ಪ್ರಾಥಮಿಕ ಸಿದ್ಧತೆಗಳು ನಡೆದಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಈವರೆಗೂ ದೂರು ನೀಡಿಲ್ಲ. ಆದರೆ ವಿಧಾನಸಭೆಯಲ್ಲಿ ಇದು ಪ್ರಸ್ತಾಪವಾಗಿದೆ. ಭಾರಿ ಪ್ರಮಾಣದ ಚರ್ಚೆಯಾಗಿದೆ. ಇಷ್ಟೆಲ್ಲಾ ಆದ ಮೇಲೆ ನಾವು ಸುಮ್ಮನೇ ಇರಲು ಸಾಧ್ಯವಿಲ್ಲ. ಸರ್ಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆಯಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ವಿಧಾನಸಭೆಯಲ್ಲಿ ಈವರೆಗೂ ನಡೆಯದೇ ಇರುವಂತಹ ಎಲ್ಲಾ ವಿಚಾರಗಳೂ ಈ ಪ್ರಕರಣದಲ್ಲಿ ನಡೆದಿವೆ. ಹೀಗಾಗಿ ಇನ್ನೂ ತಡ ಮಾಡುವುದು ಸೂಕ್ತವಲ್ಲ ಎಂಬುದು ಸರ್ಕಾರದ ಅಭಿಪ್ರಾಯ. ಮುಖ್ಯಮಂತ್ರಿಯವರ ಜೊತೆ ಚರ್ಚಿಸುವ ಮುನ್ನ ಪೂರ್ವಭಾವಿಯಾಗಿ ಗೃಹ ಇಲಾಖೆಯಿಂದ ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ರಾಜಣ್ಣ ಅವರು ದೂರು ನೀಡಿದ ತಕ್ಷಣವೇ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿಯವರು ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಆದರೆ ರಾಜ್ಯಸರ್ಕಾರ ತನ್ನದೇ ಆದ ವಿಚಾರಣೆಯನ್ನು ನಡೆಸಲಿದೆ. ಬಿಜೆಪಿಯವರು ಹೇಳಿದಂತೆ ತನಿಖೆ ಮಾಡಲಾಗುವುದಿಲ್ಲ ಎಂದು ತಿರುಗೇಟು ನೀಡಿದರು.
ಹನಿಟ್ರ್ಯಾಪ್ ಪ್ರಕರಣವನ್ನು ರಾಜ್ಯಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಸಚಿವ ಕೆ.ಎನ್.ರಾಜಣ್ಣ ಅವರ ಜೊತೆಗೆ 48 ಮಂದಿ ಹನಿಟ್ರ್ಯಾಪ್‍ಗೆ ಒಳಗಾಗಿದ್ದಾರೆ. ಅವರ ವಿಡಿಯೋ ಮತ್ತು ಸಿಡಿಗಳಿವೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಸದನದಲ್ಲಿ ಏಕಾಏಕಿ ಈ ವಿಚಾರ ಪ್ರಸ್ತಾಪವಾಗಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಈ ಪ್ರಕರಣದಲ್ಲಿ ತಮ್ಮ ಮೇಲೆ ಯಾರೂ ಪ್ರಭಾವ ಬೀರುವ ಯತ್ನ ಮಾಡಿಲ್ಲ. ನಮ್ಮ ಪಾಡಿಗೆ ನಾವು ತನಿಖೆಗೆ ತಯಾರಿ ಮಾಡಿಕೊಂಡಿದ್ದೇವೆ. ದೂರು ದಾಖಲಿಸುವಂತೆ ಒತ್ತಡ ಹಾಕಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ ಎಂದು ತಿಳಿಸಿದರು.
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…
ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…