ರಾಜ್ಯ

ಹನಿಟ್ರ್ಯಾಪ್‌ ತನಿಖೆಗೆ ಪ್ರಾಥಮಿಕ ಸಿದ್ದತೆ ; ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ತನಿಖೆ ನಡೆಸಲು ಈಗಾಗಲೇ ಪ್ರಾಥಮಿಕ ಸಿದ್ಧತೆಗಳು ನಡೆದಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಈವರೆಗೂ ದೂರು ನೀಡಿಲ್ಲ. ಆದರೆ ವಿಧಾನಸಭೆಯಲ್ಲಿ ಇದು ಪ್ರಸ್ತಾಪವಾಗಿದೆ. ಭಾರಿ ಪ್ರಮಾಣದ ಚರ್ಚೆಯಾಗಿದೆ. ಇಷ್ಟೆಲ್ಲಾ ಆದ ಮೇಲೆ ನಾವು ಸುಮ್ಮನೇ ಇರಲು ಸಾಧ್ಯವಿಲ್ಲ. ಸರ್ಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆಯಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ವಿಧಾನಸಭೆಯಲ್ಲಿ ಈವರೆಗೂ ನಡೆಯದೇ ಇರುವಂತಹ ಎಲ್ಲಾ ವಿಚಾರಗಳೂ ಈ ಪ್ರಕರಣದಲ್ಲಿ ನಡೆದಿವೆ. ಹೀಗಾಗಿ ಇನ್ನೂ ತಡ ಮಾಡುವುದು ಸೂಕ್ತವಲ್ಲ ಎಂಬುದು ಸರ್ಕಾರದ ಅಭಿಪ್ರಾಯ. ಮುಖ್ಯಮಂತ್ರಿಯವರ ಜೊತೆ ಚರ್ಚಿಸುವ ಮುನ್ನ ಪೂರ್ವಭಾವಿಯಾಗಿ ಗೃಹ ಇಲಾಖೆಯಿಂದ ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ರಾಜಣ್ಣ ಅವರು ದೂರು ನೀಡಿದ ತಕ್ಷಣವೇ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿಯವರು ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಆದರೆ ರಾಜ್ಯಸರ್ಕಾರ ತನ್ನದೇ ಆದ ವಿಚಾರಣೆಯನ್ನು ನಡೆಸಲಿದೆ. ಬಿಜೆಪಿಯವರು ಹೇಳಿದಂತೆ ತನಿಖೆ ಮಾಡಲಾಗುವುದಿಲ್ಲ ಎಂದು ತಿರುಗೇಟು ನೀಡಿದರು.

ಹನಿಟ್ರ್ಯಾಪ್ ಪ್ರಕರಣವನ್ನು ರಾಜ್ಯಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಸಚಿವ ಕೆ.ಎನ್.ರಾಜಣ್ಣ ಅವರ ಜೊತೆಗೆ 48 ಮಂದಿ ಹನಿಟ್ರ್ಯಾಪ್‍ಗೆ ಒಳಗಾಗಿದ್ದಾರೆ. ಅವರ ವಿಡಿಯೋ ಮತ್ತು ಸಿಡಿಗಳಿವೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಸದನದಲ್ಲಿ ಏಕಾಏಕಿ ಈ ವಿಚಾರ ಪ್ರಸ್ತಾಪವಾಗಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಈ ಪ್ರಕರಣದಲ್ಲಿ ತಮ್ಮ ಮೇಲೆ ಯಾರೂ ಪ್ರಭಾವ ಬೀರುವ ಯತ್ನ ಮಾಡಿಲ್ಲ. ನಮ್ಮ ಪಾಡಿಗೆ ನಾವು ತನಿಖೆಗೆ ತಯಾರಿ ಮಾಡಿಕೊಂಡಿದ್ದೇವೆ. ದೂರು ದಾಖಲಿಸುವಂತೆ ಒತ್ತಡ ಹಾಕಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

13 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

14 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago