ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ.
ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿತ್ತು. ಈಗ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಭೂಗರ್ಭದಲ್ಲಿ ಅಪಾರ ಪ್ರಮಾಣದ ಸಂಪತ್ತು ಅಡಗಿದೆ ಎಂಬ ನಂಬಿಕೆಯಿದೆ. ಇಲ್ಲಿನ ಭೂಮಿಯಲ್ಲಿ ಕೆಲ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ.
ಈ ಹಿನ್ನೆಲೆಯಲ್ಲಿ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿರುವ ಬೆನ್ನಲ್ಲೇ ಮುದನೂರು ಗ್ರಾಮದಲ್ಲಿಯೂ ಅಪಾರ ಪ್ರಮಾಣದ ಸಂಪತ್ತು ಸಿಗುವ ನಿರೀಕ್ಷೆ ಮೂಡಿದ್ದು, ಇಲ್ಲಿಯೂ ಉತ್ಖನನ ಮಾಡುವಂತೆ ಒತ್ತಾಯ ಕೇಳಿಬಂದಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ಅಪಾರ ಪ್ರಮಾಣದ ವಜ್ರ, ಚಿನ್ನಾಭರಣ ಸಂಪತ್ತು ಅಡಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ 160 ಮನೆಗಳನ್ನು ಸ್ಥಳಾಂತರಿಸಿ ಉತ್ಖನನ ಮಾಡಿದರೆ ಭೂಗರ್ಭದಲ್ಲಿ ಅಡಗಿರುವ ಸಂಪತ್ತು ಬೆಳಕಿಗೆ ಬರಲಿದೆ. ಈಗಾಗಲೇ ಜಿಲ್ಲಾಡಳಿತ 160 ಮನೆಗಳ ಸ್ಥಳಾಂತರಕ್ಕೆ ಗುರುತಿಸಿದೆ. ಇಲ್ಲಿಯೂ ಕೂಡ ಜಿಲ್ಲಾಡಳಿತ ಉತ್ಖನನ ಮಾಡುವ ಸಾಧ್ಯತೆ ದಟ್ಟವಾಗಿದೆ.





