ರಾಜ್ಯ

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್(ಜಿಬಿಐಟಿ) ಡಿಪಿಆರ್ ಸಿದ್ಧಪಡಿಸಲು ಮುಂದಾಗಿದೆ.

ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸುಮಾರು 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ಜಿಬಿಐಟಿ ತೀರ್ಮಾನಿಸಿದೆ.

ಟೆಂಡರ್ ಪ್ರಕ್ರಿಯೆಯ ಭಾಗವಾಗಿ ಜೂನ್ 22ರಂದು ಟೆಂಡರ್ ತೆರೆಯಲಾಗುವುದು. ಅಲ್ಲಿ ಆಯ್ಕೆಯಾಗುವ ಸಂಸ್ಥೆಗೆ ಟೌನ್‌ಶಿಪ್‌ನ ಸಮಗ್ರ ರೂಪರೇಷೆ ಸಿದ್ಧಪಡಿಸುವ ಜವಾಬ್ದಾರಿ ವಹಿಸಲಾಗುತ್ತದೆ.

ಡಿಪಿಆರ್‌ನಲ್ಲಿ ಏನೆಲ್ಲ ಇರಲಿದೆ
ಟೆಂಡರ್ ಪಡೆಯುವ ಸಂಸ್ಥೆಯು ಟೌನ್‌ಶಿಪ್‌ನ ಸಂಪೂರ್ಣ ಬ್ಲೂಪ್ರಿಂಟ್, ಮಾಸ್ಟರ್ ಪ್ಲಾನ್ ಹಾಗೂ ರೋಡ್‌ಮ್ಯಾಪ್ ಸಿದ್ಧಪಡಿಸಬೇಕು. ಇದರ ಜೊತೆಗೆ, ಟೌನ್‌ಶಿಪ್ ಅನುಷ್ಠಾನದ ಕಾರ್ಯತಂತ್ರ,ರಸ್ತೆ, ನೀರು, ಒಳಚರಂಡಿ, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳ ಯೋಜನೆ, ಸಾಮಾಜಿಕ ಹಾಗೂ ನಾಗರಿಕ ಸೌಲಭ್ಯಗಳ ವಿವರ, ಹೂಡಿಕೆ ಮಾದರಿ ಹಾಗೂ ಹಣಕಾಸಿನ ವ್ಯವಸ್ಥೆ, ಯೋಜನೆ ಜಾರಿಗೆ ಸಂಬಂಧಿಸಿದ ಹಂತವಾರು ಕಾರ್ಯಯೋಜನೆ ಇತ್ಯಾದಿ ಅಂಶಗಳನ್ನು ಒಳಗೊಂಡ ಸಮಗ್ರ ವರದಿ ಸಲ್ಲಿಸಬೇಕಿದೆ.

ಒಂದೆಡೆ ರೈತರ ಪ್ರತಿಭಟನೆ ಹಾಗೂ ರಾಜಕೀಯ ಜಟಾಪಟಿ ಮುಂದುವರಿದಿದ್ದರೂ, ಮತ್ತೊಂದೆಡೆ ಆಡಳಿತಾತ್ಮಕವಾಗಿ ಯೋಜನೆಗೆ ವೇಗ ನೀಡುವ ಉದ್ದೇಶದಿಂದ ಜಿಬಿಐಟಿ ಡಿಪಿಆರ್ ಪ್ರಕ್ರಿಯೆ ಆರಂಭಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.

ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆಯ್ಕೆಯಾಗುವ ಸಲಹಾ ಸಂಸ್ಥೆ ಸಲ್ಲಿಸುವ ವರದಿಯ ಆಧಾರದ ಮೇಲೆ ಬಿಡದಿ ಟೌನ್‌ಶಿಪ್‌ನ ಅಂತಿಮ ವಿನ್ಯಾಸ ಹಾಗೂ ಅನುಷ್ಠಾನದ ದಿಕ್ಕು ಸ್ಪಷ್ಟವಾಗಲಿದೆ.

ಆಂದೋಲನ ಡೆಸ್ಕ್

Recent Posts

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

12 mins ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 mins ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

23 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

28 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

55 mins ago

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…

1 hour ago